ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ
ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಶಿವಮೊಗ್ಗ ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. 186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ…
ಸಚಿವ ಸಂಪುಟಕ್ಕೆ ಆಗಲಿದೆ ಭರ್ಜರಿ ಸರ್ಜರಿ? ನಾಳೆ ಸಿಎಂ, ಡಿಸಿಎಂ ದೆಹಲಿ ಪ್ರವಾಸ ನಿಕ್ಕಿ ಯಾವ ಸಚಿವ ಕಳೆದುಕೊಳ್ಳಲಿದ್ದಾರೆ ಹುದ್ದೆ?
ಸಚಿವ ಸಂಪುಟಕ್ಕೆ ಆಗಲಿದೆ ಭರ್ಜರಿ ಸರ್ಜರಿ? ನಾಳೆ ಸಿಎಂ, ಡಿಸಿಎಂ ದೆಹಲಿ ಪ್ರವಾಸ ನಿಕ್ಕಿ ಯಾವ ಸಚಿವ ಕಳೆದುಕೊಳ್ಳಲಿದ್ದಾರೆ ಹುದ್ದೆ? ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟಕ್ಕೆ ಸರ್ಜರಿ ಮಾಡಲು ಮುಂದಾಗಿದೆಯೇ? ಇಂಥದ್ದೊಂದು ಪ್ರಶ್ನೆ ಇದೀಗ ಉದ್ಭವಿಸಿದೆ. ಇದಕ್ಕೆ ಕಾರಣ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿರುವುದು. ಆರೇಳು ಸಚಿವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಹಗರಣಗಳ ಆರೋಪದ ನಂತರ ಇದೀಗ…
ರಾಜ್ಯ ಬಾಲಭವನ ಅಧ್ಯಕ್ಷರ ಭೇಟಿಯಿಂದ ಆಗಿದ್ದೇನು?ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಹೇಳಿದ್ದೇನು?
ರಾಜ್ಯ ಬಾಲಭವನ ಅಧ್ಯಕ್ಷರ ಭೇಟಿಯಿಂದ ಆಗಿದ್ದೇನು? ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಹೇಳಿದ್ದೇನು? ರಾಜ್ಯ ಬಾಲಾಭವನ ಅಧ್ಯಕ್ಷರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್ ರವರೊಂದಿಗೆ ರಾಜ್ಯ ಬಾಲ ಭವನ ಸೊಸೈಟಿಯ ಅನುದಾನದಲ್ಲಿ ಮಹಾತ್ಮಾ ಗಾಂಧಿ ಪಾರ್ಕ್ ನಲ್ಲಿ ನಡೆಯುತ್ತಿರುವ ಮಕ್ಕಳ ಪುಟಾಣಿ ರೈಲು, ಈಜು ಕೊಳ ನಿರ್ವಹಣೆ ಪರಿಶೀಲಿಸಿ ಇವುಗಳ ಉತ್ತಮ ನಿರ್ವಹಣೆ ಹಾಗೂ ಉನ್ನತೀಕರಣದ ಬಗ್ಗೆ ಮಹಾ ನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮಕ್ಕಳ ಉಪಯೋಗಕ್ಕೆ ಯೋಗ್ಯವಾಗುವಂತೆ ಪಾಲಿಕೆ CSR ಅನುದಾನ ಬಳಸಿಕೊಳ್ಳಲು…
ಕಾಗೋಡಜ್ಜನ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ
ಕಾಗೋಡಜ್ಜನ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ ಅನಾರೋಗ್ಯದ ಕಾರಣದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷರಾದ ಕಾಗೋಡು ತಿಮ್ಮಪ್ಪನವರನ್ನು ಭೇಟಿಯಾದ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಮಧು ಬಂಗಾರಪ್ಪರವರು, ಅವರ ಆರೋಗ್ಯ ವಿಚಾರಿಸಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ನಡೆದ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಈ…
ಮಳೆಯಲ್ಲೇ ನೆಂದು ಗಾಜನೂರು ಡ್ಯಾಮಿಗೆ ಬಾಗಿನ ಅರ್ಪಿಸಿದ ಸಚಿವರು…ಆ ನಂತರ ವಿವಿಧ ಮಳೆಹಾನಿ ಕ್ಷೇತ್ರಗಳಿಗೆ ಭೇಟಿ
ಮಳೆಯಲ್ಲೇ ನೆಂದು ಗಾಜನೂರು ಡ್ಯಾಮಿಗೆ ಬಾಗಿನ ಅರ್ಪಿಸಿದ ಸಚಿವರು… ಆ ನಂತರ ವಿವಿಧ ಮಳೆಹಾನಿ ಕ್ಷೇತ್ರಗಳಿಗೆ ಭೇಟಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಜುಲೈ 28ರ ಭಾನುವಾರ ಬೆಳಿಗ್ಗೆಯಿಂದ ಗಾಜುನೂರು ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿದರು. ಸುರಿದ ಮಳೆಯಲ್ಲಿ ನೆನೆಯುತ್ತಲೇ ಜಲಾಶಯವನ್ನು ವಿವಿಧ ಕೋನಗಳಿಂದ ವೀಕ್ಷಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು. ನಂತರ ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾದ ಮಂಡ್ಲಿ,…
ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು: ಕೆ.ವಿ.ಪ್ರಭಾಕರ್**ಸನ್ಮಾನಿಸಲ್ಪಟ್ಟ ಸಿಎಂ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ…*
*ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು: ಕೆ.ವಿ.ಪ್ರಭಾಕರ್* *ಸನ್ಮಾನಿಸಲ್ಪಟ್ಟ ಸಿಎಂ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ…* ಶಿವಮೊಗ್ಗ ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ…
ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ**ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ*
*ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ* *ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ* ಶಿವಮೊಗ್ಗ ಜು 27: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತಿನ…