ಸೋಗಾನೆ ಲೇಔಟ್ ನಿರ್ಮಾಣ-ರೈತರನ್ನು ಒಕ್ಕಲೆಬ್ಬುಸುವುದಿಲ್ಲ : ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್*
*ಸೋಗಾನೆ ಲೇಔಟ್ ನಿರ್ಮಾಣ-ರೈತರನ್ನು ಒಕ್ಕಲೆಬ್ಬುಸುವುದಿಲ್ಲ : ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* ಶಿವಮೊಗ್ಗ, ಸೋಗಾನೆಯಲ್ಲಿ ಸೂಡಾ ವತಿಯಿಂದ ಅಭಿವೃದ್ದಿಪಡಿಸಲು ಉದ್ದೇಶಿಸಿರುವ ಲೇಔಟ್ ಕುರಿತು ರೈತರಲ್ಲಿ ತಪ್ಪು ತಿಳುವಳಿಕೆ ನಿವಾರಣೆ ಆಗಬೇಕು. ಅಲ್ಲಿ ಯಾವುದೇ ಬಗರ್ ಹುಕುಂ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸ.ನಂ 156 ರ ಪ್ರದೇಶದಲ್ಲಿ ಸೂಡಾ ಲೇಔಟ್ ನಿರ್ಮಿಸುವ ಕುರಿತು ರೈತರೊಂದಿಗೆ ಚರ್ಚಿಸಲು ಶನಿವಾರ ಸೂಡಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು…