ಸೆ.12 ಕ್ಕೆ ಶಿವಮೊಗ್ಗದಲ್ಲಿ ಮತ್ತೆ ಸೌಹಾರ್ದವೇ ಹಬ್ಬ
ಸೆ.12 ಕ್ಕೆ ಶಿವಮೊಗ್ಗದಲ್ಲಿ ಮತ್ತೆ ಸೌಹಾರ್ದವೇ ಹಬ್ಬ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿ’ ವತಿಯಿಂದ ಸೆ. 12 ರಂದು ಮಧ್ಯಾಹ್ನ 3 ಗಂಟೆಗೆ ‘ಸೌಹಾರ್ದವೇ ಹಬ್ಬ’ ಶೀರ್ಷಿಕೆ ಅಡಿಯಲ್ಲಿ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿಯ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಮಿತಿ ತಿಳಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ. ಶ್ರೀಪಾಲ್, ಕಳೆದ ಎರಡು ವರ್ಷಗಳಿಂದ ಈ ಶಾಂತಿ ಜಾಥಾವನ್ನು ಹಮ್ಮಿಕೊಂಡಿದ್ದೆವು. ಗಣೇಶ ಹಬ್ಬ ಹಾಗೂ…
ಚಳುವಳಿಗಳ ಸಂತ ಕೆ.ಪಿ.ಶ್ರೀಪಾಲ್; ಎಂ.ಶ್ರೀಕಾಂತ್ ಎಂ. ಶ್ರೀಕಾಂತ್ ಶಾಸಕರಾಗಲಿ- ಕೆ.ಪಿ.ಶ್ರೀಪಾಲ್
ಚಳುವಳಿಗಳ ಸಂತ ಕೆ.ಪಿ.ಶ್ರೀಪಾಲ್; ಎಂ.ಶ್ರೀಕಾಂತ್ ಎಂ. ಶ್ರೀಕಾಂತ್ ಶಾಸಕರಾಗಲಿ- ಕೆ.ಪಿ.ಶ್ರೀಪಾಲ್ ಎಂ. ಶ್ರೀಕಾಂತ್ ಅವರು ಕೊಡುಗೈ ದಾನಿಯಾಗಿದ್ದಾರೆ. ಸಾವಿರಾರು ಜನರಿಗೆ ಸಹಾಯ ಮಾಡಿದ್ದಾರೆ. ಯಾರನ್ನೂ ಬರಿಗೈಯಲ್ಲಿ ಕಳಿಸಿದ್ದೇ ಇಲ್ಲ. ಹೋರಾಟಗಾರರಿಗೆ ಸ್ಪೂರ್ತಿ ತುಂಬಿದ್ದಾರೆ. ಎಲ್ಲಾ ವಿಷಯಕ್ಕೂ ಶ್ರೀಕಾಂತ್ ಬೇಕು. ಆದರೆ, ಚುನಾವಣೆ ಬಂದಾಗ ಮಾತ್ರ ಏಕೆ ಬೇಡವಾಗುತ್ತಾರೋ ಗೊತ್ತಿಲ್ಲ. ಮುಂದಿನ ಬಾರಿಯಾದರೂ ಎಂ. ಶ್ರೀಕಾಂತ್ ಶಾಸಕರಾಗಬೇಕು. -ಕೆ.ಪಿ. ಶ್ರೀಪಾಲ್ ವಕೀಲ ಕೆ.ಪಿ. ಶ್ರೀಪಾಲ್ ಅವರು ಚಳವಳಿಗಳ ಸಂತ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೊಡುಗೈ ದಾನಿ ಎನಿಸಿಕೊಂಡಿರುವ…
ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೌಷ್ಟಿಕ ಆಹಾರ ಕುರಿತು ಅರಿವು ಕಾರ್ಯಕ್ರಮ
ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೌಷ್ಟಿಕ ಆಹಾರ ಕುರಿತು ಅರಿವು ಕಾರ್ಯಕ್ರಮ ಶಿವಮೊಗ್ಗ : ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಹಯೋಗದೊಂದಿಗೆ ಗುರುವಾರ ರಾಷ್ಟ್ರೀಯ ಪೋಷಕಾಂಶ ಸಪ್ತಾಹದ ಅಂಗವಾಗಿ ನಗರದ ಸೈನ್ಸ್ ಮೈದಾನದ ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೋಷಕಾಂಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬಿ.ವೈ.ಚಂದ್ರಶೇಖರ್ ಅವರು ಮಾತನಾಡಿ, ನಾವು ನಿತ್ಯವೂ ತರಕಾರಿ, ಸೊಪ್ಪು, ಹಣ್ಣುಗಳನ್ನು ಸೇವಿಸಿದರೆ ಆರೋಗ್ಯವು…
ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ: ಶಿವಮೊಗ್ಗದ ಶಿಕ್ಷಕಿ ಲಕ್ಷ್ಮಿಗೂ ಒಲಿದ ಪ್ರಶಸ್ತಿ
ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ: ಶಿವಮೊಗ್ಗದ ಶಿಕ್ಷಕಿ ಲಕ್ಷ್ಮಿಗೂ ಒಲಿದ ಪ್ರಶಸ್ತಿ ಮುಂಡರಗಿಯ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯದ ಮೂರು ಜನ ಶಿಕ್ಷಕರಿಗೆ ,’2024ರ ಮಕ್ಕಳಸ್ನೇಹಿ ಶಿಕ್ಷಕ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು ಶಿವಮೊಗ್ಗದ ಲಕ್ಷ್ಮಿ ಎಸ್., ಗುಲ್ಬರ್ಗಾದ ರವೀಂದ್ರ ರುದ್ರವಾಡಿ, ಗದಗ ಜಿಲ್ಲೆಯ ನಾಗನಗೌಡ ಮೇಟಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5000 ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪಲಕ ನೀಡಿ ಗೌರವಿಸಲಾಗುವಿದೆಂದು ಪ್ರತಿಷ್ಠಾನದ ಅಧ್ಯಕ್ಷ ಡಾ….
ಕಿಡ್ನಿ ಕಸಿಯಲ್ಲಿ ಎನ್ ಯು ಆಸ್ಪತ್ರೆ ಸಮೂಹದ ಸೇವೆ ಶ್ಲಾಘನೀಯ- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕಿಡ್ನಿ ಕಸಿಯಲ್ಲಿ ಎನ್ ಯು ಆಸ್ಪತ್ರೆ ಸಮೂಹದ ಸೇವೆ ಶ್ಲಾಘನೀಯ- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಲೆನಾಡಿನಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಎನ್‌ಯು ಸಮೂಹ ಸಂಸ್ಥೆಯ ಆಸ್ಪತ್ರೆಯು ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಇಲಾಖೆಯ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅವರು ಇಂದು ಮಾಚೇನಹಳ್ಳಿಯಲ್ಲಿರುವ ಎನ್‌ಯು ಆಸ್ಪತ್ರೆಯಲ್ಲಿ ಪ್ರಥಮ ಕಿಡ್ನಿ ಟ್ರಾನ್ಸ್‌ಪ್ಲೆಂಟ್‌ಟೇಷನ್ ಯಶಸ್ವಿ ಶಸ್ತ್ರ ಚಿಕಿತ್ಸೆಯ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿವಮೊಗ್ಗದ ಜನರು…
ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ವಾತಿ ಎಂಟರ್ಪ್ರೈಸಸ್ ಗೆ ರೂ.10,000/- ಹಾಟ್‌ಸ್ಪಾಟ್ ಕೆಫೆ ಹಾಗೂ ರೈಲ್ವೆ ನಿಲ್ದಾಣದಲ್ಲಿನ ಕಾಫಿ ಶಾಪ್ ಗಳಿಗೆ ತಲಾ ರೂ.5000/- ಗಳ ದಂಡ
ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ ಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ವಾತಿ ಎಂಟರ್ಪ್ರೈಸಸ್ ಗೆ ರೂ.10,000/- ಹಾಟ್‌ಸ್ಪಾಟ್ ಕೆಫೆ ಹಾಗೂ ರೈಲ್ವೆ ನಿಲ್ದಾಣದಲ್ಲಿನ ಕಾಫಿ ಶಾಪ್ ಗಳಿಗೆ ತಲಾ ರೂ.5000/- ಗಳ ದಂಡ ಶಿವಮೊಗ್ಗ, ಆಹಾರ ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಗಳು ಜಂಟಿಯಾಗಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ದಾಳಿ ನಡೆಸಿ ಪಟ್ಟಣ ಸಾಮಗ್ರಿ…
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದ ಕುವೆಂಪು ವಿವಿಯಲ್ಲಿ ಸಭೆಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವ ಭರವಸೆಪದವಿ ಕಾಲೇಜುಗಳ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ: ಮಧು ಬಂಗಾರಪ್ಪ
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದ ಕುವೆಂಪು ವಿವಿಯಲ್ಲಿ ಸಭೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವ ಭರವಸೆ ಪದವಿ ಕಾಲೇಜುಗಳ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ: ಮಧು ಬಂಗಾರಪ್ಪ ಶಂಕರಘಟ್ಟ, ಆಗಸ್ಟ್ 3: ಪದವಿ ಕಾಲೇಜುಗಳ ಸಂಯೋಜನ ಪ್ರಕ್ರಿಯೆಗೆ ಅನುಮತಿ ನೀಡುವುದು ತಡವಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಪ್ರವೇಶಾತಿ ಪಡೆಯುವಿಕೆ ಸಮಸ್ಯೆಯಾಗುತ್ತಿರುವುದು ತಿಳಿದುಬಂದಿದೆ. ಇದನ್ನು ಕೂಡಲೇ ಬಗೆಹರಿಸುವುದಾಗಿ ರಾಜ್ಯ ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು….