ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ : ಗುರುದತ್ತ ಹೆಗಡೆ
ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ : ಗುರುದತ್ತ ಹೆಗಡೆ ಶಿವಮೊಗ್ಗ : ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಕುಂದು-ಕೊರತೆ, ಸಮಸ್ಯೆ, ಸೇವಾಸೌಲಭ್ಯಗಳ ತ್ವರಿತ ಸ್ಪಂದನೆಗಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ…