*ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಲೋಕಾರ್ಪಣೆ-ಸದುಪಯೋಗಪಡಿಸಿಕೊಳ್ಳಲು ಕರೆ*
*ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಲೋಕಾರ್ಪಣೆ-ಸದುಪಯೋಗಪಡಿಸಿಕೊಳ್ಳಲು ಕರೆ* ಶಿವಮೊಗ್ಗ, ಸಾರ್ವಜನಿಕರಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹೊಸ ಆಧಾರ್ ಸೇವಾ ಕೇಂದ್ರವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಶಿವಮೊಗ್ಗ ಎಸಿ ಡಾ.ಮೈತ್ರಿ ತಿಳಿಸಿದರು. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ಯುಐಡಿಎಐ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ಮಾದರಿಯ ಆಧಾರ್ ಸೇವಾ…


