ಶಿವಮೊಗ್ಗವೂ ಸೇರಿದಂತೆ ಕರ್ನಾಟಕದ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು
*ಶಿವಮೊಗ್ಗವೂ ಸೇರಿದಂತೆ ಕರ್ನಾಟಕದ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು* ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್ಗಳಿಗೆ ವರ್ಗಾಯಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧದ ಸರ್ಕಾರದ ಆದೇಶವನ್ನು ಪಾಲಿಕೆ ಆಯುಕ್ತರಿಗೆ ಈಗಾಗಲೇ ತಿಳಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ವೈದ್ಯಕೀಯ ಆರೋಗ್ಯಾಧಿಕಾರಿಗಳು ಹೋಟೆಲ್,…


