ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ; ವಿರೂಪಾಕ್ಷಪ್ಪ
ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ; ವಿರೂಪಾಕ್ಷಪ್ಪ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು. ಮಂಗಳವಾರ ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್ ಹಾಲ್ನಲ್ಲಿ ಮಾಧ್ಯಮಗಾರರನ್ನು ಉದ್ದೇಶಿಸಿ ಅವರು ಮಾತನಾಡಿ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ 1200 ಹಾಸಿಗೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಅಕ್ಕ ಪಕ್ಕದ ಜಿಲ್ಲೆಗಳಾದ ಚಿಕ್ಕಮಗಳೂರು,…