ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ತಿರಂಗ ಹಾರಿಸುವ ಮೂಲಕ ಇಂದು ಆಚರಣೆ
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ತಿರಂಗ ಹಾರಿಸುವ ಮೂಲಕ ಇಂದು ಆಚರಿಸಲಾಯಿತು
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ತಿರಂಗ ಹಾರಿಸುವ ಮೂಲಕ ಇಂದು ಆಚರಿಸಲಾಯಿತು
*ಸಿರಿಗೆರೆ ಸರ್ಕಾರಿ ಶಾಲೆ ಮಕ್ಕಳಿಗೆ ಸ್ವೆಟರ್ ವಿತರಿಸಿದ ಸಂಸದ ರಾಘವೇಂದ್ರ* ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಯೋಜನೆ ಅಡಿಯಲ್ಲಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಿರಿಗೆರೆ ವಿದ್ಯಾರ್ಥಿಗಳಿಗೆ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರರವರು ಸ್ವೆಟರ್ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಜಿತ, ಅಭಿಜಿತ್, ಗ್ರಾಮದ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದ್ದರು.
*ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ* *ಉಲ್ಲಂಘಿಸಿದರೆ ಬೀಳುತ್ತೆ ದಂಡ* *ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು* ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ (Muzrai Temples) ಪ್ಲಾಸ್ಟಿಕ್ ಬಳಕೆ (Plastic Ban) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ…
*ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಎಂ.ಶ್ರೀಕಾಂತ್ ಅಪೆಕ್ಸ್ ಬ್ಯಾಂಕಿನ ನಾಮ ನಿರ್ದೇಶನ ಸದಸ್ಯರಾಗಿ ನೇಮಕ* ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಅಪೆಕ್ಸ್ ಬ್ಯಾಂಕಿನ ನಾಮ ನಿರ್ದೇಶಿತ ಸದಸ್ಯರನ್ನಾಗಿ ಕಾಂಗ್ರೆಸ್ ಮುಖಂಡರಾ ಎಂ.ಶ್ರೀಕಾಂತ್ ರವರನ್ನು ನೇಮಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದ ಮುಖ್ಯ ಪ್ರಧಾನ ವ್ಯವಸ್ಥಾಪಕರು ಆದೇಶಿಸಿದ್ದಾರೆ. ಈ ಮೊದಲು ನೇಮಕವಾಗಿದ್ದ ಅಪೆಕ್ಸ್ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಲ್.ಜಗದೀಶ್ ರವರ ನಾಮ ನಿರ್ದೇಶನವನ್ನು ತಕ್ಷಣವೇ ವಾಪಸ್ ಪಡೆಯಲಾಗಿದೆ ಎಂದು ಆದೇಶ ಪತ್ರದಲ್ಲಿದೆ….
ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು : ತಕ್ಷಣ ಕಾರ್ಯಪ್ರವೃತ್ತರಾದ ಡಾ. ಧನಂಜಯ ಸರ್ಜಿ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳು ದಿಢೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅಲ್ಲಿಯೇ ಇದ್ದ ಸರ್ಕಾರಿ ಆಂಬುಲೆನ್ಸ್ ನಲ್ಲಿ…
*ಧ್ವಜಾರೋಹಣ ಮಾಡಿದ ಬಳ್ಳೆಕೆರೆ ಸಂತೋಷ್* *ಶ್ರೀ ಬಸವೇಶ್ವರಸ್ವಾಮಿ ಪಟ್ಟಣ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ* ಶಿವಮೊಗ್ಗದ ನೆಹರೂ ರಸ್ತೆಯಲ್ಲಿರುವ ಶ್ರೀ ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ರಾದ ಬಳ್ಳೆಕೆರೆ ಸಂತೋಷ್ ರವರಿಂದ 79 ನೇ ಸ್ವಾತಂತ್ರ್ಯದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳು, ಕಾರ್ಯದರ್ಶಿಗಳು,ನೌಕರ ವರ್ಗ, ಪಿಗ್ಮಿಸಂಗ್ರಹಕಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯದಿನಾಚರಣೆ – 2025 *ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ : ಮಧು ಬಂಗಾರಪ್ಪ* ಶಿವಮೊಗ್ಗ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಧು ಬಂಗಾರಪ್ಪ ಸ್ಮರಿಸಿದರು. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ…
*ಹರೋಹರ ಜಾತ್ರೆ ವಿಶೇಷ* *ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ* ಹೊಳೆಹೊನ್ನೂರು ಸರ್ಕಲ್ನಿಂದ ಗುರುಪುರದ ಯಲವಟ್ಟಿ ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ *ನೀವು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ* ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ….
*ನಟ ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್* ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದು ನಟ ದರ್ಶನ್ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್…