ಪಿಒಪಿ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್*
*ಪಿಒಪಿ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್* ಗಣೇಶ ಚತುರ್ಥಿಗೆ (Ganesh Chaturthi 2025) ಇನ್ನೇನು ಕೆಲವೇ ದಿನಗಳಿದ್ದು, ಬೆಂಗಳೂರಿನಲ್ಲಿ ಹಬ್ಬದ ಆಚರಣೆ ಸಂಬಂಧ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪಿಒಪಿಯಂತಹ ನಿಷೇಧಿತ ವಸ್ತುಗಳಿಂದ ಗಣೇಶ ಮೂರ್ತಿಗಳನ್ನು ತಯಾರಿಸುವುದು ಹಾಗೂ ಮಾರಾಟ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದಾಗಿ ಬಿಬಿಎಂಪಿ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಆಯಾ ಬಿಬಿಎಂಪಿ ಉಪವಿಭಾಗಗಳ ನೋಡಲ್ ಅಧಿಕಾರಿಗಳು, ಪೊಲೀಸ್, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆಗಳ ಅಧಿಕಾರಿಗಳಿಗೆ ಗಣೇಶ…