*ಚಿಕಿತ್ಸೆಗೆ ಹಣವಿಲ್ಲದೇ ಹತಾಶನಾದ ತಂದೆ…* *ವಿಶೇಷ ಚೇತನ ಮಗನಿಗೇ ವಿಷವಿಕ್ಕ!!*
*ಚಿಕಿತ್ಸೆಗೆ ಹಣವಿಲ್ಲದೇ ಹತಾಶನಾದ ತಂದೆ…* *ವಿಶೇಷ ಚೇತನ ಮಗನಿಗೇ ವಿಷವಿಕ್ಕ!!* ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಬಾಗಲೂರು ನಿವಾಸಿಗಳಾದ ಸತ್ಯ ಮತ್ತು ಮುನಿಕೃಷ್ಣ ದಂಪತಿಯ ಮಗ ಜೋಯಲ್ ಹುಟ್ಟಿನಿಂದಲೇ ಗಂಭೀರ ಆರೋಗ್ಯ ಸಮಸ್ಯೆಗಳು ಹಾಗೂ ವಿಶೇಷ ಚೇತನತೆಯಿಂದ ಬಳಲುತ್ತಿದ್ದ. ಮಗುವಿನ ನಿರಂತರ ಚಿಕಿತ್ಸೆ, ಆಸ್ಪತ್ರೆಗಳ ಓಡಾಟ ಮತ್ತು ಹೆಚ್ಚುತ್ತಿರುವ ಖರ್ಚಿನಿಂದ…


