ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು; ತೀವ್ರ ತನಿಖೆ ಆಗಲೇಬೇಕಾದ ಪ್ರಕರಣ!
ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು; ತೀವ್ರ ತನಿಖೆ ಆಗಲೇಬೇಕಾದ ಪ್ರಕರಣ! ಬೆಂಗಳೂರು, ಮಾ.20: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ(Hippopotamus) ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ…


