ಮೇ.18 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದೇನು?*
*ಸರ್ಕಾರಿ ನೌಕರರ ಕ್ರೀಡಾಕೂಟ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದೇನು?* ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು. ಅವರು ನೌಕರರ ಸಂಘದ ಸಭಾಂಗಣದಲ್ಲಿ ಕ್ರೀಡಾಕೂಟದ ಲಾಂಛನ, ಕ್ರೀಡಾ ಸಮವಸ್ತ್ರ ಹಾಗೂ ಟ್ರೋಫಿ ಬಿಡುಗಡೆಗೊಳಿಸಿ, ಪತ್ರಿಕಾ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು….