*ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ;* *ಅಪಾಯದಲ್ಲಿ ಮಕ್ಕಳು, ಗರ್ಭಿಣಿಯರು* *ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ*
*ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ;* *ಅಪಾಯದಲ್ಲಿ ಮಕ್ಕಳು, ಗರ್ಭಿಣಿಯರು* *ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ* ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ…


