ಡಾ.ರಹಮತ್ ತರಿಕೆರೆ- ಮೊಹರಂ: ಜನತೆಯ ಧರ್ಮ
ಡಾ.ರಹಮತ್ ತರಿಕೆರೆ- ಮೊಹರಂ: ಜನತೆಯ ಧರ್ಮ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ ಸಾವು ದಾರುಣ ಸಂಗತಿಯಾಗಲು ಕಾರಣ, ಅವರ ತಲೆಕಡಿದು ಮೆರವಣಿಗೆ ಮಾಡಲಾಯಿತು. ಜತೆಯಿದ್ದ ಎಳೆಗೂಸುಗಳು ಕುಡಿಯಲು ನೀರಿಲ್ಲದೆ ಪರಿತಪಿಸುತ್ತ ಸತ್ತರು. ಮಹಿಳೆಯರು ದುಃಖದಿಂದ ಪರಿತಪಿಸಿದರು. ಇದನ್ನು ಜನಪದರು ‘ಧರಮಕ ಸತ್ತವರಾ ಕೋಟಿಗೊಬ್ಬ ಜನರಾ, ಆರಾಣ್ಯಾದಾಗ ಅವರಾ ಕಾಣದ…