ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*
*ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;*
*ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ*
*ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*
ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ (Karnataka Cabinet) ಸಭೆ ಗುರುವಾರ ಅನುಮೋದನೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್ಕೆ ಪಾಟೀಲ್ ಈ ಮಾಹಿತಿ ಬಹಿರಂಗಪಡಿಸಿದರು.
*ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*
ರಾಜ್ಯದ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು (MNC), ಐಟಿ, ಖಾಸಗಿ ಕೈಗಾರಿಕಾ ವಲಯಗಳಲ್ಲಿ ಮುಟ್ಟಿನ ರಜೆ ಅನ್ವಯವಾಗಲಿದೆ ಎಂದು ಪಾಟೀಲ್ ತಿಳಿಸಿದರು.
ದೇಶದಲ್ಲಿ ಮೊದಲ ಬಾರಿಗೆ 1992 ರಲ್ಲಿ ಬಿಹಾರದಲ್ಲಿ ಮುಟ್ಟಿನ ರಜೆಯನ್ನು ಘೋಷಿಸಲಾಗಿತ್ತು. ಆ ಮೂಲಕ ಮುಟ್ಟಿನ ರಜೆ ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಬಿಹಾರ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆಯನ್ನು ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಮಹಿಳೆಯರಿಗೆ ಕೆಲವು ನಿಬಂಧನೆಗಳೊಂದಿಗೆ ಮುಟ್ಟಿನ ರಜೆ ನೀಡಲಾಗುತ್ತಿದೆ.