ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ

ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು.
ಈ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪಾಲಾಕ್ಷಿ,
ಅಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರು ಪಿಐಎಲ್ ಪ್ರಕರಣವೊಂದರ ವಿಚಾರಣೆ ನಡೆಸುವ ಸಂದರ್ಭದಲ್ಲಿ ಹಿರಿಯ ವಕೀಲರೆಂದು ಹೇಳಿಕೊಳ್ಳುತ್ತಿರುವ ರಾಕೇಶ್ ಕಿಶೋರ್ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದು ಹಲ್ಲೆ ನಡೆಸಲು ಮುಂದಾಗಿದ್ದು, ಇದು ನಮ್ಮ ಸಂವಿಧಾನಕ್ಕೆ ಅಪಮಾನ ಮಾಡಿದಂತಾಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೆಂದರೆ ಸಂವಿಧಾನದ ರಕ್ಷಕರು. ಅವರ ಮೇಲೆಯೇ ಈ ರೀತಿ ಹಲ್ಲೆ ನಡೆಸುವಂತಹ ಹೇಯಕೃತ್ಯವನ್ನು ನಾವು ಸಹಿಸುವುದಿಲ್ಲ. ಇದು ನಮ್ಮ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಇಡೀ ಭಾರತೀಯರ ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಡಿಎಸ್ಎಸ್ ನ ಸಂಚಾಲಕರಾದ ರಂಗಪ್ಪ ಮಾತನಾಡಿ, ಈ ಕೃತ್ಯ ನಡೆಸಲು ನ್ಯಾಯಾದೀಶರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಮನಸ್ಸಿನಿಂದ ಈ ತರಹ ಹೇಯ ಕೃತ್ಯ ಎಸಗಿರಬಹುದು ಎಂಬ ಅನುಮಾನಗಳು ಶುರುವಾಗಿದೆ.ಇದು ನಮ್ಮ ಸಂವಿಧಾನ ಶಿಲ್ಪಿ ಡಾ// ಬಿ ಆರ್ ಅಂಬೇಡ್ಕರ್ ರವರಿಗೆ ಮಾಡಿದ ಅವಮಾನವಾಗಿದೆ. ಇದನ್ನು ತೀವ್ರವಾಗಿ ಪರಿಗಣಿಸಿ ತನಿಖೆಗೆ ಒಳಪಡಿಸಬೇಕು.ಹಲ್ಲೆ ನಡೆಸಿದ ವಕೀಲರನ್ನು ವಕೀಲರ ಪರಿಷತ್ ಅಮಾನತ್ತು ಮಾಡಿದೆ. ಆದರೆ, ರಾಕೇಶ್ ಕಿಶೋರ್‍ರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಇಲ್ಲದೇ ಹೋದಲ್ಲಿ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆ ಇದೆ. ಆದ್ದರಿಂದ ರಾಕೇಶ್ ಕಿಶೋರ್‍ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಪ್ರಸನ್ನ,NSUI ಜಿಲ್ಲಾಧ್ಯಕ್ಷ ವಿಜಯ, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಬಾಲಾಜಿ, ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ವರುಣ್ ವಿ ಪಂಡಿತ್ , ಶಬರೀಶ್, ಆಕಾಶ್, ತರುಣ್, ಹಾಲಸ್ವಾಮಿ, ಕರಣ, ಮನೋಜ್, LLB ಕಾಲೇಜು ಘಟಕದ ಅಧ್ಯಕ್ಷ ಲೋಹಿತ್ ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು