ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಿಡ್ಡಿಯ 65 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇಾವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಮಹಿಳೆಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆಯಾಗಿ ಅವರನ್ನು ಕರೆದುಕೊಂಡು ಬಂದ ನಂತರ ಮತ್ತೆ ಜ್ವರ ಕಾಣಿಸಿಕೊಂಡು ಉಲಬಣಗೊಂಡಿತು ಎನ್ನಲಾಗಿದೆ.
ಈವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 43 ಮಂಗನಕಾಯಿಲೆಯ ಪ್ರಕರಣಗಳು ಪತ್ತೆಯಾಗಿದೆ. ಎಲ್ಲಾ ಪ್ರಕರಣಗಳು ಸಿದ್ದಾಪುರ ತಾಲೂಕಿನಲ್ಲೇ ಕಾಣಿಸಿಕೊಂಡಿವೆ.
ಸಿದ್ದಾಪುರವು ಮಂಗನಕಾಯಿಲೆಯ ಹಾಟ್ ಸ್ಪಾಟ್ ಆಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚಾಗುತ್ತಲೇ ಇದೆ. ಜನವರಿ ಕೊನೆಯ ವಾರ ಹಾಗೂ ಫೆಬ್ರವರಿ ಮೊದಲ ವಾರದ ಮಧ್ಯೆ ಸುಮಾರು 37 ಮಂದಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎನ್ನಲಾಗಿದೆ.