ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ*

*ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ*

ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2ಸಿ ರಲ್ಲಿ ಮಗು(1) ಕಲಂ 3ರ ನಿಬಂಧನೆಗಳ ನಿಯಮಾನುಸಾರ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಯನ್ವಯ ಮುಚ್ಚಳಿಕೆಯನ್ನು ಆಯೋಜಕರು ನೀಡುವುದು.
ಈ ರೀತಿಯ ಮಕ್ಕಳನ್ನು 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ಇರುವುದಿಲ್ಲ. ಮಗುವಿನ ರಕ್ಷಣೆಗೆ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು ಹಾಗೂ ಕಾರ್ಯಕ್ರಮದಿಂದ ಬರುವ ಆದಾಯದಲ್ಲಿ ಕನಿಷ್ಠ ಶೇ.20% ರಷ್ಟು ಮಗುವಿನ ಹೆಸರಿಗೆ ನಿಶ್ಚಿತ ಠೇವಣಿ ಇಡುವುದು. ಈ ರೀತಿ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಮಕ್ಕಳನ್ನು ಬಳಸಿಕೊಂಡಲ್ಲಿ ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಆಯೋಜಕರು/ ನಿರ್ಮಾಪಕರು ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
——————————