ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ
ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ತೀರ್ಥಹಳ್ಳಿ ಹಾಗೂ ಕೋಣಂದೂರು ಲಿಂಗಪ್ಪ ಅಭಿನಂದನಾ ಸಮಿತಿ ಕೋಣಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ (ಫೆ. 24 ಶನಿವಾರ) ಸಂಜೆ 4 ಕ್ಕೆ ತೀರ್ಥಹಳ್ಳಿ ಬಾಳೇಬೈಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾಜಿ ಶಾಸಕ, ಸಾಹಿತಿ ಕೋಣಂದೂರು ಲಿಂಗಪ್ಪ ಅವರ 90 ನೇ ವರ್ಷದ ವರ್ಷಾಚರಣೆ ಹಾಗೂ ಅಭಿನಂದನಾ ಸಮಾರಂಭ ಮತ್ತು ಸಾಹಿತಿ ಡಾ.ಜೆ.ಕೆ.ರಮೇಶ್ ಅವರು ಸಂಪಾದಿಸಿರುವ ‘ ಕೋಲಿಂ ಎಂಬ ಕೌತುಕ’ ಅಭಿನಂದನಾ ಗ್ರಂಥದ ದ್ವಿತೀಯ ಆವೃತ್ತಿಯ ಬಿಡುಗಡೆ ಸಮಾರಂಭ ಜರಗಲಿದೆ.
ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಂಜುನಾಥ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ರಾಜ್ಯದ ಮಾಜಿ ಗೃಹ ಸಚಿವರೂ, ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಆರಗ ಜ್ಞಾನೇಂದ್ರ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯದ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಿದ್ದು, ಗ್ರಂಥದ ಕುರಿತು ಸಾಹಿತಿ ಬಿ.ಚಂದ್ರೇಗೌಡ ಅವರು ಮಾತನಾಡುವರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥ ಗೌಡ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಗೀತಾ ರಮೇಶ್ ಅವರು ಭಾಗವಹಿಸಲಿದ್ದಾರೆ.
ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಕೊಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಟಿ.ಕೆ.ರಮೇಶ್ ಶೆಟ್ಟಿ, ಕೋಲಿಂ ಅಭಿನಂದನಾ ಸಮಿತಿ ಅಧ್ಯಕ್ಷ ಕಲ್ಗದ್ದೆ ರತ್ನಾಕರ್ ಹಾಗೂ ಸದಸ್ಯರು ಮತ್ತು ಕಸಾಪ ತೀರ್ಥಹಳ್ಳಿ ಘಟಕದ ಕೋಶಾಧ್ಯಕ್ಷ ಹಾಲಿಗೆ ನಾಗರಾಜ್, ಕಾರ್ಯದರ್ಶಿಗಳಾದ ಗಾಯತ್ರಿ ಶೇಷಗಿರಿ ಮತ್ತು ಸೌಳಿ ನಾಗರಾಜ್ , ಸಂಘಟನಾ ಕಾರ್ಯದರ್ಶಿಗಳಾದ ಮುನ್ನೂರು ಮೋಹನ್ ಹಾಗೂ ಪ್ರಸನ್ನ ತಿರಳೇಬೈಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.