ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ

ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ

ಪಂಚಾಯತ್‍ರಾಜ್ ಇಲಾಖೆ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಅಬ್ದುಲ್ ನಜೀರ್‍ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ಆಯನೂರು, ಕೋಹಳ್ಳಿ, ಹಾರನಹಳ್ಳಿ, ಮಂಡಘಟ್ಟ, ತಮ್ಮಡಿಹಳ್ಳಿ ಹಾಗೂ ಸಿರಿಗೆರೆ ಗ್ರಾಮ ಪಂಚಾಯಿತಿಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಿಂದ 26 ರವರೆಗೆ ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಯನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫೆ. 24 ರಂದು ಸಂಜೆ 4.00ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರಿಂದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಎಸ್. ಪೂರ್ಯಾನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐ.ಟಿ.ಬಿ.ಟಿ. ಸಚಿವ ಪ್ರಿಯಾಂಕ ಖರ್ಗೆ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿಗಳ ಉಪಾಧ್ಯಕ್ಷರು, ಸದಸ್ಯರುಗಳು, ಎಸ್.ಡಿ.ಎಂ.ಸಿ., ಅಧ್ಯಕ್ಷರು ಮತ್ತು ಸದಸ್ಯರುಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು, ಎಲ್ಲಾ ಗ್ರಾಮಗಳ ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು, ಸಿ.ಆರ್.ಪಿ. ಸಾಹಿತಿಗಳು, ಪೋಷಕರು, ವಿದ್ಯಾರ್ಥಿವೃಂದ, ಸ್ಥಳೀಯ ಪ್ರಾಯೋಜಕರು ಮತ್ತು ಗ್ರಾಮಗಳ ಗ್ರಾಮಸ್ಥರುಗಳು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಗಾಯಕಿ ಶ್ರೀಮತಿ ಸುರೇಖಾ ಹೆಗ್ಡೆ, ರಂಗಭೂಮಿ ಕಲಾವಿದ ಕೊಟ್ರಪ್ಪ ಜಿ., ಸಾಹಿತಿಗಳಾದ ಬೆಳ್ಳಿಗನೂಡು ಹಸನ್ ಮತ್ತು ಟಿ.ವಿ.ಭಾರತ್ ಸಂಪಾದಕರು ಹಾಲಸ್ವಾಮಿ ಇವರುಗಳು ಉಪಸ್ಥಿತರಿರುತ್ತಾರೆ.
——————
*ಫೆ. 26 ಮತ್ತು 27: ವಿದ್ಯುತ್ ವ್ಯತ್ಯಯ*

ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಸಂತೇಕಡೂರು ಹಮ್ಮಿಕೊಂಡಿರುವುದರಿಂದ ಫೆ.25 ಮತ್ತು 26 ರಂದು ಬೆಳಗ್ಗೆ 11.0 ರಿಂದ ಸಂಜೆ 6.00ರವರೆಗೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.