ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರು* *ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ನೀಡಿದ ಆ 13 ಸಲಹೆ- ಸೂಚನೆಗಳೇನು?*
*ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರು*
*ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ನೀಡಿದ ಆ 13 ಸಲಹೆ- ಸೂಚನೆಗಳೇನು?*
 
 
 
ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರೂ ಮಹಾ ನಿರ್ದೇಶಕರೂ ಮತ್ತು ಪೊಲೀಸ್ ಮಹಾ ನಿರೀಕ್ಷಕರೂ ಆದ ಎಂ.ಎ.ಸಲೀಂರವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಶಿವಮೊಗ್ಗ ನಗರದ ಡಿ ಎ ಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಪೊಲೀಸ್ ಗೌರವ ವಂದನೆಗಳನ್ನು ಸ್ವೀಕರಿಸಿದರು.
ಆ ನಂತರ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಪೋಲಿಸ್ ನಿರೀಕ್ಷಕರ ಮೇಲ್ಪಟ್ಟ ಅಧಿಕಾರಿಗಳಿಗೆ ವಿಮರ್ಶನ ಸಭೆಯನ್ನು ನಡೆಸಿದರು. ನಂತರ ಪೊಲೀಸ್ ಅಧಿಕಾರಿಗಳ ಕುರಿತು ಮಾತನಾಡಿದ ಅವರು, 13 ಸಲಹೆ- ಸೂಚನೆಗಳನ್ನು ನೀಡಿದರು.
1. ಶಿವಮೊಗ್ಗ ಜಿಲ್ಲೆ *ಒಂದು ಸೂಕ್ಷ್ಮ ಮತ್ತು ಪ್ರಮುಖವಾದ ಜಿಲ್ಲೆಯಾಗಿದ್ದು* ಪೊಲೀಸ್ ಕಾರ್ಯವೈಖರಿಯಿಂದ ಈ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
2. ಶಿವಮೊಗ್ಗ ಜಿಲ್ಲೆಯು *ಭೌಗೋಳಿಕವಾಗಿ ಮಾತ್ರವಲ್ಲದೆ ಪ್ರಕರಣಗಳ ವರದಿಯಲ್ಲೂ ಸಹ ದೊಡ್ಡ ಜಿಲ್ಲೆಯಾಗಿದ್ದು* ಯಾವುದೇ ಒಂದು ಪ್ರದೇಶದಲ್ಲಿ ಜರುಗುವ ಅಪರಾಧ ಕೃತ್ಯಗಳು ಇತರೆ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತವೆ. ಆದ್ದರಿಂದ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಮಟ್ಟ ಹಾಕುವಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.
3. *ಮಾದಕ ದ್ರವ್ಯದ ಕುರಿತು ತಳಮಟ್ಟದ ಮಾಹಿತಿಯನ್ನು ಸಂಗ್ರಹಿಸಿ* ಗಾಂಜಾ ವನ್ನು ಬೆಳೆಯುವವರು, ಸೇವನೆ ಮಾಡುವವರು, ಮಾರಾಟ ಮಾಡುವವರು, ಸಂಗ್ರಹಣೆ ಮಾಡುವವರು ಮತ್ತು ಸಾಗಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿಯ ನಿರ್ದ್ಯಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಿದರು.
4. *ಶಿವಮೊಗ್ಗ ಜಿಲ್ಲೆಯು ರಾಜ್ಯದಲ್ಲಿ ಎಲ್ಲರ ಗಮನವನ್ನು ಸೆಳೆದಿರುವ ಒಂದು ಮುಖ್ಯವಾದ ಜಿಲ್ಲೆಯಾಗಿದ್ದು,* ಶಿವಮೊಗ್ಗದಂತಹ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದರೆ ಎಲ್ಲಾ ಆಯಾಮದ policing ಅನುಭವ ದೊರೆಯಲಿದೆ. ಆದ್ದರಿಂದ ಎಲ್ಲರೂ ಶ್ರಮವಹಿಸಿ ಕರ್ತವ್ಯ ನಿರ್ವಹಿಸಿ.
5. ಶಿವಮೊಗ್ಗ ಜಿಲ್ಲೆಯು ದೊಡ್ಡ ಜಿಲ್ಲೆಯಾದ ಕಾರಣ *RAF, KSRP, KSISF, DAR, SAF ನಂತಹ ಎಲ್ಲಾ ರೀತಿಯ ಪೊಲೀಸ್ ಘಟಕಗಳು* ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೀವು ನಿರ್ವಹಿಸುವ ಕಾರ್ಯದಿಂದ ನಿಮ್ಮ ಯಶಸ್ಸು ಕಾಣುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯ ಅಧಿಕಾರಿಯ ಸಿಬ್ಬಂದಿಗಳನ್ನು ಒಳಗೊಂಡು ಎಲ್ಲರೂ ಕರ್ತವ್ಯದಲ್ಲಿ ಬೆರೆತು ಕೆಲಸ ಮಾಡಿ.
6. ಶಿವಮೊಗ್ಗ ಜಿಲ್ಲೆಯ *ಜನಸಂಖ್ಯೆಗೆ ಅನುಗುಣವಾಗಿ ಸಾಕಷ್ಟು ಸಂಖ್ಯೆಯ ಪೊಲೀಸ್ ಬಲವು ಲಭ್ಯವಿದ್ದು* , ಪಾರದರ್ಶಕವಾಗಿ ಮತ್ತು ಜನರ ಸಮಸ್ಯೆಗೆ ಸ್ಪಂದಿಸುವಂತೆ ಸಂಯಮದಿಂದ ವರ್ತಿಸಿ, ಸಾರ್ವಜನಿಕರ ಸೇವೆಗೆ ಸದಾ ಕಾಲ ಲಭ್ಯವಿರಿ. ನಿಮ್ಮ ಶ್ರಮವೇ ನಿಮ್ಮ ಯಶಸ್ಸನ್ನು ತೋರಿಸುತ್ತದೆ.
7. ಪೊಲೀಸ್ *ಇಲಾಖೆಯ ಯಶಸ್ಸು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರು ಇಟ್ಟಿರುವಂತಹ ನಂಬಿಕೆಯ* ಮೇಲೆ ನಿಂತಿರುತ್ತದೆ ಆದ್ದರಿಂದ ನೀವು ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಕಾನೂನು ವ್ಯಾಪ್ತಿಗೆ ಒಳಪಟ್ಟು ಕರ್ತವ್ಯ ನಿರ್ವಹಿಸಿ.
8. *ನೊಂದವರಿಗೆ ನೆರವು ಹಾಗೂ ಅಪರಾಧಿಗೆ ಶಿಕ್ಷೆ ಎಂಬ ತತ್ವದ ಆಧಾರದ ಮೇಲೆ* ಕಾರ್ಯನಿರ್ವಹಿಸಿ, ಈ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ತನಿಖೆಯನ್ನು ಕೈಗೊಂಡು ಆರೋಪಿತರಿಗೆ ಶಿಕ್ಷೆಯಾಗುವಲ್ಲಿ ನಿಮ್ಮ ಪಾತ್ರವೂ ಬಹಳ ಮುಖ್ಯ ವಿದ್ದು, ತನಿಖೆಯಲ್ಲಿ ಲೋಪ ಬರದಂತೆ ಕರ್ತವ್ಯ ನಿರ್ವಹಿಸುವುದು ಸೂಕ್ತ.
9. *ನೀವು ನಿರ್ವಹಿಸಬೇಕಾದ ಕರ್ತವ್ಯಗಳ ಮೇಲೆ ಶ್ರದ್ಧೆ ಇರುವುದು ಮುಖ್ಯವಿದ್ದು,* ನೀವು ಕೈಗೊಳ್ಳುವಂತಹ ಗುಣಮಟ್ಟದ ತನಿಖೆಯಿಂದ ಮಾತ್ರ ಶಿಕ್ಷೆಯ ಪ್ರಮಾಣವು ಹೆಚ್ಚಾಗುತ್ತದೆ, ಆ ಸಂದರ್ಭದಲ್ಲಿ ಗುಂಪುಗಳು ರೌಡಿ ಹಾಗೂ ಗೂಂಡಾ ಆಸಾಮಿ ಗಳಿಗೆ ಶಿಕ್ಷೆಯಾಗುವ ಸಾಧ್ಯತೆಯೂ ಹೆಚ್ಚಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಉಪಟಳ ನೀಡುವವರ ವಿರುದ್ಧ ಕ್ರಮ ಕೈಗೊಂಡಂತೆಯೂ ಸಹ ಆಗುತ್ತದೆ.
10. ಪೋಲಿಸ್ ಇಲಾಖೆಯ *ಪ್ರಾಥಮಿಕ ಮತ್ತು ನಿಜವಾದ ಕೆಲಸವೆಂದರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು,* ನೊಂದವರಿಗೆ ನೆರವು ನೀಡುವುದು, ಸಾರ್ವಜನಿಕರ ಸೇವೆಗೆ ಸದಾ ಕಾಲ ಲಭ್ಯವಿರುವುದು, ಸಮುದಾಯದ ಕಡೆಗೆ ಪೋಲಿಸ್ ಇಲಾಖೆ ಅನ್ನು ಕೊಂಡೊಯ್ಯುವುದು, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವುದು ಹಾಗೂ ತಡೆಯುವುದು, ಈ ರೀತಿಯ ಪ್ರಮುಖವಾದ ಕರ್ತವ್ಯಗಳನ್ನು ನಿರ್ವಹಿಸಬೇಕಿರುತ್ತದೆ.
11. *ಈ ದಿನಗಳಲ್ಲಿ ನೀವು ನಿರ್ವಹಿಸುವಂತಹ ಕೆಲಸಗಳು ಮತ್ತು ನೀವು ಕೈಗೊಳ್ಳುವಂತಹ ನಿರ್ಧಾರಗಳು ಮುಂದಿನ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನೇರವಾದ ಪರಿಣಾಮ* ಬೀರುತ್ತದೆ, ಆದ್ದರಿಂದ ಮೇಲ್ಕಂಡ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿ, ಆಗ ಮಾತ್ರ ಪೊಲೀಸ್ ಕೆಲಸವೂ ಸುಲಭವಾಗುತ್ತದೆ ಮತ್ತು ಯಶಸ್ಸು ದೊರಕುತ್ತದೆ.
12. *ಯಾವುದೇ ಒಂದು ಕೆಲಸ ತನಿಖೆ ಹಾಗೂ ಇತರ ಇಲಾಖೆಗಳೊಂದಿಗೆ ವ್ಯವಹರಿಸುವಾಗ* ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ಆಗ ಮಾತ್ರ ನೀವು ಮಾಡಿದಂತಹ ಕೆಲಸಕ್ಕೆ ಸೂಕ್ತ ನ್ಯಾಯ ತೊರಕಿಸಿದಂತಾಗುತ್ತದೆ.
13. *ಮಹಜರುಗಳನ್ನು ನಡೆಸುವಾಗ ಮತ್ತು ಸಾಕ್ಷಿದಾರಗಳನ್ನು ಆಯ್ದುಕೊಳ್ಳುವಾಗ* ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರಿ ಪಂಚರನ್ನು ಮತ್ತು ಸರ್ಕಾರಿ ಸಾಕ್ಷಿದಾರರನ್ನು ಆಯ್ದುಕೊಳ್ಳಿ, ಇಂತಹ ನಡೆಯಿಂದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣವು ಹೆಚ್ಚಾಗುತ್ತದೆ ಎಂದು ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಬಿ ಆರ್ ರವಿಕಾಂತ್ ಗೌಡ ಐಪಿಎಸ್, (ಪೊಲೀಸ್ ಮಹಾ ನಿರೀಕ್ಷಕರು ಪೂರ್ವ ವಲಯ ದಾವಣಗೆರೆ), ಮಿಥುನ್ ಕುಮಾರ್ ಜಿ.ಕೆ., (ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ), ಎ ಜಿ ಕಾರ್ಯಪ್ಪ, (ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ), ರಮೇಶ್ ಕುಮಾರ್ (ಹೆಚ್ಚುವರಿ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ) ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧ್ಯಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.


