*ಶಿವಮೊಗ್ಗ ನಗರದೊಳಗೆ ಭಾರೀ ವಾಹನಗಳ ಸಂಚಾರ ನಿಷೇಧ: ಡಿಸಿ ಗುರುದತ್ತ ಹೆಗಡೆ ಆದೇಶ*

*ಶಿವಮೊಗ್ಗ ನಗರದೊಳಗೆ ಭಾರೀ ವಾಹನಗಳ ಸಂಚಾರ ನಿಷೇಧ: ಡಿಸಿ ಗುರುದತ್ತ ಹೆಗಡೆ ಆದೇಶ*

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಶಿವಮೊಗ್ಗ ನಗರ ಗೋಪಿ ಸರ್ಕಲ್‌ನಿಂದ ಜೆಪಿಎನ್ ರಸ್ತೆ, ಜ್ಯುವೆಲ್ ರಾಕ್ ಹೊಟೇಲ್ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆ ಮತ್ತು ಜೈಲ್ ರಸ್ತೆ ಮೂಲಕ ಲಕ್ಷ್ಮಿ ಟಾಕೀಸ್ ವರೆಗೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.