ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ
*ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!*
*ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿ*
ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ
ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS Officer Mahantesh Bilagi) ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಇಂದು (ನವೆಂಬರ್ 25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ದೌಡಾಯಿಸಿದ್ದಾರೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.


