*ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ*

*ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ*

ಶಂಕರಘಟ್ಟ,

ರಾಜಸ್ಥಾನದ ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಡಿ. 01ರಿಂದ 04ರವರೆಗೆ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ವಿಶ್ವವಿದ್ಯಾಲಯಗಳ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸುದೀಪ್ ಪುರುಷರ ಹೈಜಂಪ್ ನಲ್ಲಿ 2.08 ಮೀಟರ್ ಎತ್ತರ ಜಿಗಿದು ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಚಿನ್ನ ಗೆದ್ದ ಸುದೀಪ್ ಅವರನ್ನು ಕುಲಸಚಿವ ಎ. ಎಲ್. ಮಂಜುನಾಥ್ ಅಭಿನಂದಿಸಿದರು. ಡಾ. ಎನ್. ಡಿ. ವಿರೂಪಾಕ್ಷ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.