*ಡಿ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ*

*ಡಿ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ*

ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ. 20ರ ಶನಿವಾರ ಬೆಳಿಗ್ಗೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್, ಹಾಲಿ ಅಧ್ಯಕ್ಷ ವೈದ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಂಘದ ರಾಜ್ಯ ಅಧ್ಯಕ್ಷ ಟಿ. ವಿ. ಶಿವಾನಂದ ತಗಡೂರುರವರು ಉದ್ಘಾಟಿಸಿ ಆಶಯ ನುಡಿಗಳನ್ನಾಡಲಿದ್ದಾರೆ.

ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಗಳೂ ಆದ ಹೆಚ್.ಬಿ. ಮದನಗೌಡರವರು, ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ.ಲೋಕೇಶ್‌ರವರು ಪ್ರಮಾಣವಚನ ಬೋಧಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆರ್.ಮಾರುತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಾಸನ ಜಿಲ್ಲಾಧ್ಯಕ್ಷ ಜಿ.ಆರ್.ಕೆಂಚೆಗೌಡ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ (ಟೆಲೆಕ್ಸ್), ಜಿಲ್ಲಾ ಚುನಾವಣಾಧಿಕಾರಿಗಳು, ಸಹಕಾರ ಇಲಾಖೆಯ ಸಹಾಯಕ ನಿಬಂಧಕರು ಆದ ಟಿ. ವಿ. ಶ್ರೀನಿವಾಸ್‌ರವರನ್ನು ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ. ನಿರ್ಗಮಿತ ಅಧ್ಯಕ್ಷರಾದ ಕೆ. ವಿ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್‌ ರವರನ್ನು ಪುರಸ್ಕರಿಸಲಾಗುವುದು.

2025-28ರ ಸಾಲಿನ ನಿಯೋಜಿತ ಅಧ್ಯಕ್ಷರಾದ ಹೆಚ್.ಯು.ವೈದ್ಯನಾಥ್ (ವೈದ್ಯ), ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಾಲಸ್ವಾಮಿ ಹಾಗೂ ನೂತನ ಕಾರ್ಯಕಾರಿ ಸಮಿತಿ ಸದಸ್ಯರು ಅಧಿಕಾರ ಸ್ವೀಕರಿಸಲಿದ್ದಾರೆ.

ಈ ಪದಗ್ರಹಣ ಸಮಾರಂಭದಲ್ಲಿ ಪತ್ರಕರ್ತರು, ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ನೇತಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಿರ್ಗಮಿತ ಪ್ರಧಾನ ಕಾರ್ಯದರ್ಶಿ ವಿ.ಟಿ.ಆರುಣ್‌ ಕೋರಿದ್ದಾರೆ.