*ಗಾಂಧಿ ಕುಟುಂಬದ ವಿರುದ್ಧ ಷಡ್ಯಂತ್ರ ಖಂಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಕಾಂಗ್ರೆಸ್ ನಾಯಕರ ಪ್ರತಿಭಟನೆ* *ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ*

*ಗಾಂಧಿ ಕುಟುಂಬದ ವಿರುದ್ಧ ಷಡ್ಯಂತ್ರ ಖಂಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಕಾಂಗ್ರೆಸ್ ನಾಯಕರ ಪ್ರತಿಭಟನೆ*

*ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ*

ಕೇಂದ್ರ ಸರ್ಕಾರವು ತನ್ನ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರದ ವಿರುದ್ಧ ಇಂದು ಬೆಳಗಾವಿ ಸುವರ್ಣಸೌಧದ ಮುಂಭಾಗವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಭಾಗವಹಿಸಿದ್ದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನ್ಯಾಯಾಲಯವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿರುವ ED ತನಿಖಾ ಸಂಸ್ಥೆಗೆ ಛಾಟಿ ಬೀಸಿದ್ದು ED ಸಲ್ಲಿಸಿದ ಚಾರ್ಜ್ ಶೀಟ್ ಅನ್ನು ತಿರಸ್ಕರಿಸಿದೆ ಇದು ಸತ್ಯಕ್ಕೆ ಸಂದ ಜಯವಾಗಿದೆ. ಪ್ರಜಾಪ್ರಭುತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಬಿಜೆಪಿಗರ ಪ್ರಜಾಪ್ರಭುತ್ವ ವಿರೋಧಿ ಧೋರಣೆಯನ್ನು ಖಂಡಿಸಿದರು.

ಈ ವೇಳೆ ಸಚಿವ ಸಂಪುಟದ ಸದಸ್ಯರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರುಗಳು ಹಾಜರಿದ್ದರು.