ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ವಿರುದ್ಧ ಬಿಜೆಪಿ ಪ್ರತಿಭಟನೆ

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ವಿರುದ್ಧ ಬಿಜೆಪಿ ಪ್ರತಿಭಟನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ತರುತ್ತಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿದೇಯಕ-2025’ ಕೇವಲ ಒಂದು ವರ್ಗದ ಓಲೈಕೆಗಾಗಿ ರೂಪಿಸಿರುವ ಕರಾಳ ಕಾನೂನಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಈ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ, ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ  ಪ್ರತಿಭಟನೆ ನಡೆಯಿತು.

ಶಾಸಕರಾದ ಎಸ್ಎನ್ ಚನ್ನಬಸಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಜನಾಗ್ರಹ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾನ್ಯ ರಾಜ್ಯಪಾಲರಿಗೆ ಈ ಕೂಡಲೇ ಈ ವಿದೇಯಕವನ್ನು ತಡೆಹಿಡಿಯುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ  ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ  ನಾಗರಾಜ್,  ಜ್ಞಾನೇಶ್ವರ, ನಗರ ಬಿಜೆಪಿ ಅಧ್ಯಕ್ಷರಾದ  ಮೋಹನ್ ರೆಡ್ಡಿ, ಗ್ರಾಮಾಂತರ ಅಧ್ಯಕ್ಷರಾದ  ಸಿಂಗನಹಳ್ಳಿ ಸುರೇಶ್, ಮಾಜಿ ಶಾಸಕರಾದ  ಅಶೋಕ್ ನಾಯ್ಕ್ ಸೇರಿದಂತೆ ಜಿಲ್ಲಾ ಹಾಗೂ ನಗರದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಿದರು.