*’ಗೌರಿ’ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ*

*’ಗೌರಿ’ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ*

ಕಿರುತೆರೆ ಸೀರಿಯಲ್​ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್​​ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರ ಮಾಡುತ್ತಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು. ಅವರ ನಿಧನದಿಂದ ಕಿರುತೆರೆ ಲೋಕದಲ್ಲಿ ಶೋಕ ಆವರಿಸಿದೆ.