ಶಾಲಾ ಪಂಚಾಂಗ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಶಾಲಾ ಪಂಚಾಂಗ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ 2026 ನೂತನ ವರ್ಷದ “ಶಾಲಾ ಪಂಚಾಂಗ”ವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧು ಬಂಗಾರಪ್ಪನವರು ಬಿಡುಗಡೆಗೊಳಿಸಿ, ರಾಜ್ಯದ ಸಮಸ್ತ ಶಿಕ್ಷಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಈ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷರಾದ ಶ್ರೀ ಚಂದ್ರಶೇಖರ್ ನುಗ್ಗಲಿ, ಪ್ರಧಾನ ಕಾರ್ಯದರ್ಶಿ ಶ್ರೀ ಚೇತನ್ ಎಚ್.ಎಸ್ ಹಾಜರಿದ್ದರು.