*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!*

*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ*

*ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!*

ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ.

ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ ನಡೆದಿದೆ. ಸಾಲದಕ್ಕೆ ಫೈರಿಂಗ್ ಸಹ ಮಾಡಲಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ರಾಜ್ಯ ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದೆ. ಇದರಿಂದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಲಾಗಿದೆ.

ರಾಜಕೀಯ ಕಿತ್ತಾಟದಿಂದ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಘಟನೆಯನ್ನ ಸರಿಯಾಗಿ ನಿಭಾಯಿಸಿಲ್ಲ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ ಎಂದು ಡಿಜಿ & ಐಜಿಪಿ ವರದಿ ನೀಡಿದೆ. ಹೀಗಾಗಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಈ ಕ್ರಮಕೈಗೊಂಡಿದೆ. ನಿನ್ನೆ(ಜ.1) ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ (Pavan Nejjuru) ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಈಗ ಈಗ ಬ್ಯಾನರ್‌ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿದೆ.