*ಮದುವೆ ಭರವಸೆ ನೀಡಿ ವೈದ್ಯನಿಂದಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!* *ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್*

*ಮದುವೆ ಭರವಸೆ ನೀಡಿ ವೈದ್ಯನಿಂದಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!*

*ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್*

ಮದುವೆಯ ಭರವಸೆ ನೀಡಿ ವೈದ್ಯನೇ ನರ್ಸಿಂಗ್ ವಿದ್ಯಾರ್ಥಿ ಮೇಲೆ ಅತ್ಯಾ*ಚಾರವೆಸಗಿದ ಘಟನೆ ಉತ್ತರ ಪ್ರದೇಶದ ಕಿಯಾಸರ್‌ಬಾಗ್ ಸಮೀಪ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೈದ್ಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆರೋಪಿಯು ತನ್ನ ಜೊತೆ ಹಲವು ಬಾರಿ ದೈಹಿಕ ಸಂಬಂಧ ಹೊಂದಿದ್ದ ಎಂದು ನರ್ಸಿಂಗ್ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಕಿಯಾಸರ್‌ಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ವೈದ್ಯ ಸರ್ಕಾರಿ ವೈದ್ಯಕೀಯ ಸಂಸ್ಥೆಯಾದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಇಂಟರ್ನ್ ಆಗಿ ಕೆಲಸ ಮಾಡುತ್ತಿದ್ದ. ಆತ ತನ್ನನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾ*ಚಾರ ಎಸಗಿದ್ದಾನೆ ನಂತರ ಮದುವೆಯ ಪ್ರಸ್ತಾಪವಿಟ್ಟಾಗ ನನ್ನ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನರ್ಸಿಂಗ್ ವಿದ್ಯಾರ್ಥಿನಿ ದೂರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಿಯಾಸರ್‌ಬಾಗ್ ಉಪ ಪೊಲೀಸ್ ಆಯುಕ್ತ ವಿಶ್ವಜೀತ್ ಶ್ರೀವಾಸ್ತವ ಅವರು, ಇಂಟರ್ನ್ ವೈದ್ಯರ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದ್ದು, ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ನರ್ಸಿಂಗ್ ವಿದ್ಯಾರ್ಥಿನಿಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಹೇಳಿದರು.