*ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ ಮಾಡಿದ ಸ್ವಾಮೀಜಿ!*

*ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ ಮಾಡಿದ ಸ್ವಾಮೀಜಿ!*

*ಚಂದ್ರಶೇಖರ್ ಸುಗತ್ ಗುರೂಜಿ ಮಾಡಿದ್ದೇನು?*

ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ ಗುರೂಜಿ ಎಂಬ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಜಾಹೀರಾತು ನೀಡಲಾಗಿತ್ತು. ಜಾಹೀರಾತಿನಲ್ಲಿ ನೀಡಿದ್ದ ಸಂಖ್ಯೆಗೆ ಕರೆ ಮಾಡಿದ ಯುವತಿಯೊಂದಿಗೆ ಚಂದ್ರಶೇಖರ್ ಸುಗತ್ ಗುರೂಜಿ ಎಂದು ತನ್ನನ್ನು ಪರಿಚಯಿಸಿಕೊಂಡ ವ್ಯಕ್ತಿ ಮಾತನಾಡಿದ್ದ.

ಪ್ರೀತಿಸಿದ ಯುವಕ ಸಿಗುತ್ತಾನೆಯೇ ಎಂದು ಕೇಳಿದ ಹುಡುಗಿಯ ಬಳಿ ಆತನ ಬಗ್ಗೆ ಮಾಹಿತಿ ಪಡೆದು ಮದುವೆ ಆಗುತ್ತದೆ, ಆದರೆ ಖರ್ಚಾಗುತ್ತದೆ ಎಂದು ನಂಬಿಸಿ ಹಂತಹಂತವಾಗಿ ಆನ್‌ಲೈನ್ ಮೂಲಕ 2.05 ಲಕ್ಷ ರೂಪಾಯಿ ಪಡೆದಿದ್ದಾನೆ. ನಂತರ ಮತ್ತೆ 4 ಲಕ್ಷ ಕೇಳಿದಾಗ ಅನುಮಾನಗೊಂಡ ಯುವತಿ ಹಣ ವಾಪಸ್ ಕೇಳಿದರೆ, ಏನು ಮಾಡ್ತಿಯೋ ಮಾಡಿಕೋ ಎಂದು ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ಬಗ್ಗೆ ಯುವತಿ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.