*ದೇವರಾಜ ಅರಸು ದಾಖಲೆ ಉಡೀಸ್!* *ಹೊಸ ಇತಿಹಾಸ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ*

*ದೇವರಾಜ ಅರಸು ದಾಖಲೆ ಉಡೀಸ್!*

*ಹೊಸ ಇತಿಹಾಸ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ*

ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್​​ ಮಾಡಿದ್ದಾರೆ.

2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ 20ರಿಂದ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಅವಧಿಯಲ್ಲೂ ಈಗಾಗಲೇ 963 ದಿನ ಪೂರೈಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಪಟ್ಟಿಗೆ ಸೇರಿದ್ದಾರೆ.