*ಕರ್ನಾಟಕದಲ್ಲಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾವಿರ ನಾಟಿಕೋಳಿ ಬಿರ್ಯಾನಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ಸಿಗರು!* *ಶಿವಮೊಗ್ಗದ ಬಸ್ ನಿಲ್ದಾಣ- ಮೆಗ್ಗಾನ್ ಆಸ್ಪತ್ರೆ ಬಳಿ ಬಿರ್ಯಾನಿಗೆ ಮುಗಿಬಿದ್ದ ಜನ…*
*ಕರ್ನಾಟಕದಲ್ಲಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ*
*ಸಾವಿರ ನಾಟಿಕೋಳಿ ಬಿರ್ಯಾನಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ಸಿಗರು!*
*ಶಿವಮೊಗ್ಗದ ಬಸ್ ನಿಲ್ದಾಣ- ಮೆಗ್ಗಾನ್ ಆಸ್ಪತ್ರೆ ಬಳಿ ಬಿರ್ಯಾನಿಗೆ ಮುಗಿಬಿದ್ದ ಜನ…*

ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಸಾವಿರ ನಾಟಿ ಕೋಳಿ ಬಿರ್ಯಾನಿಯನ್ನು ಹಂಚಿ ಸಂಭ್ರಮಿಸಿದರು.
7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ. ಈ ಸಾಧನೆ ಅಭಿನಂದನಾರ್ಹ. ಹಾಗಾಗಿ, ಅವರ ಪ್ರಿಯ ಆಹಾರವಾದ ನಾಟಿಕೋಳಿ ಬಿರ್ಯಾನಿಯನ್ನು ಇವತ್ತು ಹಂಚಿ ಸಂಭ್ರಮಿಸುತ್ತಿದ್ದೇವೆ ಎಂದು ಎಂ.ಶ್ರೀಕಾಂತ್ ಹೇಳಿದರು.
2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ 20ರಿಂದ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೊಂದು ಸಂತೋಷದ ಘಳಿಗೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಹೇಳಿದರು.
ಈ ಅವಧಿಯಲ್ಲೂ ಈಗಾಗಲೇ 963 ದಿನ ಪೂರೈಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಪಟ್ಟಿಗೆ ಸೇರಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಕೆ.ರಂಗನಾಥ್ ಹೇಳಿದರು.
ಕಲಗೋಡು ರತ್ನಾಕರ್,ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷ, ಮಾಜಿ ಮೇಯರ್ ನಾಗರಾಜ ಕಂಕಾರಿ,ಮಾಜಿ ಉಪಮೇಯರ್ ಪಾಲಾಕ್ಷಿ,ಗಿರೀಶ್, ಶರತ್ ಮರಿಯಪ್ಪ, ಯು. ಶಿವಾನಂದ್,ಭಾಸ್ಕರ್, ಸುವರ್ಣ ನಾಗರಾಜ್ ಸೇರಿದಂತೆ ಹಲವರಿದ್ದರು.


