ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಜೆಪಿ ಮುಖಂಡ ಆತ್ಮಹತ್ಯೆ*

*ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಜೆಪಿ ಮುಖಂಡ ಆತ್ಮಹತ್ಯೆ*

ದಾವಣಗೆರೆ ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿನ ನಾಗನೂರು ಸಮೀಪದ ತೋಟದಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ಚಂದ್ರಶೇಖರ್ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಿಂದ ಮನನೊಂದಿದ್ದ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.