*ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಬಿ ವೈ ಆರ್ ಸಂವಾದ* *ಶಿವಮೊಗ್ಗ ಅಭಿವೃದ್ಧಿ; ಬಹುಪಾಲು ಯಶಸ್ವಿಯಾಗಿದ್ದೇನೆಂದ ಸಂಸದ ಬಿ.ವೈ.ರಾಘವೇಂದ್ರ*

*ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಬಿ ವೈ ಆರ್ ಸಂವಾದ*

*ಶಿವಮೊಗ್ಗ ಅಭಿವೃದ್ಧಿ; ಬಹುಪಾಲು ಯಶಸ್ವಿಯಾಗಿದ್ದೇನೆಂದ ಸಂಸದ ಬಿ.ವೈ.ರಾಘವೇಂದ್ರ*

ಶಿವಮೊಗ್ಗ : ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ಹೊಂದಿ ಅದರಲ್ಲಿ ಬಹು ಪಾಲು ಯಶಸ್ವಿಯಾ ಗಿದ್ದೇನೆ ಎಸಂಸದಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಇಂದು ಪತ್ರಿಕಾ ಭವನದಲ್ಲಿ ಪ್ರೆಸ್‌ಟ್ರಸ್ಟ್‌ವತಿಯಿಂದ ಆಯೋ ಜಿಸಿದ್ದ ಸಂವಾದ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂಸದನಾಗಿ ನಾನು ನಾಲ್ಕನೇ ಬಾರಿ ಆಯ್ಕೆಯಾ ಗಿದ್ದೇನೆ. ಇದಕ್ಕೆ ಎಲ್ಲರ ಸಹಕಾರವಿದೆ. ಪತ್ರಕರ್ತರ ಮಾರ್ಗದರ್ಶನವೂ ಇದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಮತ್ತು ಕೇಂದ್ರದ ಹಲವು ಯೋಜನೆಗಳ ಅಡಿಯಲ್ಲಿ ಬೈಂದೂರು ಸೇರಿದಂತೆ ಇಡೀ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಪಣತೊ ಟ್ಟಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯವೂ ನನ್ನ ಅವಧಿಯಲ್ಲಿ ಆಗಿದೆ. ಆಗಬೇಕಾದದ್ದೂ ಇದೆ. ಎಲ್ಲರ ಸಹಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಕಂಕಣ ಬದ್ಧ ನಾಗಿದ್ದೇನೆ ಎಂದರು.
ಪ್ರಧಾನಿ ಮೋದಿಯವರ ಸ್ವಚ್ಛಭಾರತದ ಅಡಿಯಲ್ಲಿ ಪ್ರತೀ ಹಳ್ಳಿಗೂ ಮೂಲಭೂತ ಸೌಕ ರ್ಯಗಳಾದ ಶೌಚಾಲಯ, ಸ್ವಚ್ಛತೆ, ಅನಿಲ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ರಾಷ್ಟ್ರೀ ಯ ಹೆದ್ದಾರಿ, ರಸ್ತೆಗಳು, ಮನೆ, ಮೊಬೈಲ್ ಟವರ್‌ಗಳು, ರೈಲ್ವೆ ಅಭಿವೃದ್ಧಿ ಸೇರಿದಂತೆ ಹಲ ವು ಮಹತ್ವದ ತೀರ್ಮಾ ನಗಳನ್ನು ತೆಗೆದುಕೊಂಡು ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿ ಯಲ್ಲೂ ಕೂಡ ಹಲವು ಅಭಿವೃದ್ಧಿಗಳು ಈಗಾಗಲೇ ಮುಗಿದಿವೆ ಎಂದರು.
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲನ್ನು ತರುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ನಿರೀಕ್ಷೆಯಿದೆ. ಆದರೆ, ಈ ರೈಲು ಆರಂಭವಾ ಗಲು ಕೋಟೆಗಂಗೂರಿನ ರೈಲ್ವೆ ಟರ್ಮಿನಲ್ ಕಾಮಗಾರಿ ಪೂರ್ಣಗೊಳ್ಳುವುದು ಅತ್ಯಗ ತ್ಯವಾಗಿದೆ. ವಂದೇ ಭಾರತ್ ರೈಲಿಗೆ ಅಗತ್ಯವಿರುವ ಶುಚಿ ಗೊಳಿಸುವಿಕೆ, ನಿರ್ವಹಣೆ ಮತ್ತು ಪ್ಲಾಟ್ ಫಾರ್ಮ್ ಸೌಲಭ್ಯಗಳು ಕೋಟೆಗಂಗೂರು ಟರ್ಮಿನಲ್ ನಲ್ಲಿ ಲಭ್ಯವಿರಲಿವೆ. ಅಲ್ಲಿಯ ವರೆಗೆ ತಾಂತ್ರಿಕ ಕಾರಣಗಳಿಂ ದಾಗಿ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದು ಸ್ವಲ್ಪ ವಿಳಂಬ ವಾಗಬಹುದು ಎಂದರು.
ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ರೈಲ್ವೆ ಟರ್ಮಿ ನಲ್ ಶಿವಮೊಗ್ಗ ನಗರಕ್ಕೆ ಪರ್ಯಾಯ ಕೇಂದ್ರವಾಗಲಿದೆ. ಈ ಟರ್ಮಿನಲ್ ಉದ್ಘಾಟನೆಯಾದ ನಂತರ ಶಿವಮೊಗ್ಗದಿಂದ ಬೆಂಗಳೂರು ಸೇರಿದಂತೆ ಇತರ ಪ್ರಮುಖ ನಗರಗಳಿಗೆ ಹೆಚ್ಚಿನ ರೈಲುಗಳನ್ನು ಆರಂಭಿಸಲು ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಲು ಹಾದಿ ಸುಗಮವಾಗಲಿದೆ ಎಂದರು.
ಈ ಬಹುನಿರೀಕ್ಷಿತ ರೈಲ್ವೆ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಶೇ.೭೫ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಂಡಿದೆ. ರೈತರಿಗೆ ಪರಿಹಾರದ ಹಣವನ್ನು ವಿತರಿಸಲು ಇನ್ನೂ ಸುಮಾರು ೧೦೦ ಕೋಟಿ ರೂಪಾಯಿಗಳ ಅನುದಾನದ ಅವಶ್ಯಕತೆಯಿದೆ. ಈ ಭೂಸ್ವಾಧೀನ ಪ್ರಕ್ರಿಯೆಯು ಒಟ್ಟಾರೆ ಶೇ.೯೦ರಷ್ಟು ಪೂರ್ಣಗೊಂಡ ತಕ್ಷಣವೇ ರೈಲ್ವೆ ಇಲಾಖೆಯು ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಲಿದೆ.
ಶಿವಮೊಗ್ಗ ನಗರದ ಗುಂಡಪ್ಪ ಶೆಡ್, ವಿದ್ಯಾನಗರದ ಅಂಡರ್ ಪಾಸ್ ಕಾಮಗಾ ರಿಗಳು ಶೀಘ್ರ ಆರಂಭವಾ ಗಲಿವೆ. ಅಲ್ಲದೆ, ಫ್ರೀಡಂ ಪಾರ್ಕ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡ ಲು ಸಿ.ಆರ್. ಎಫ್. ಅನುದಾನದಡಿ ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿ ದ್ದು, ಇದಕ್ಕೆ ಬಜೆಟ್‌ನಲ್ಲಿ ಒಪ್ಪಿಗೆ ದೊರೆತಿದೆ ಎಂದು ವಿವರಿಸಿದರು.
ವಿಶ್ವಕರ್ಮ ಯೋಜನೆ ಯಡಿಯಲ್ಲಿ ಶಿವಮೊಗ್ಗ ಜಿಲ್ಲೆ ಯಲ್ಲಿ ೧೪,೧೪೩ ಕುಶಲಕರ್ಮಿ ಗಳಿಗೆ ತರಬೇತಿ ನೀಡಲಾಗಿದೆ. ಫಲಾನುಭವಿಗಳನ್ನು ಆಯ್ಕೆ ಮಾಡಿ, ೫೫ ಕೋಟಿ ರೂ. ಸಾಲ ನೀಡಲಾಗಿದೆ. ೮,೧೨೮ ಕಿಟ್ ವಿತರಿಸಲಾಗಿದೆ. ಹಾಗೆಯೇ ೨೪೭ ಕಾಮಗಾರಿಗಳ ಮೂಲಕ ೧,೧೭೭ ಕಿಲೋ ಮೀಟರ್ ಗ್ರಾಮೀಣ ರಸ್ತೆಯನ್ನು, ೫೨೮ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸಬಜೆಟ್‌ನಲ್ಲಿಯೂ ಸಹ ೩೮೦ ಕೋಟಿ ಬೇಡಿಕೆಯನ್ನು ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ೩೯೮ ಬಿ.ಎಸ್.ಎನ್.ಎಲ್. ಟವರ್ ಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ಈಗಾಗಲೇ ೨೩೨ ಮುಗಿದಿವೆ ಎಂದರು.
ಭದ್ರಾವತಿಯ ವಿಐ ಎಸ್‌ಎಲ್ ಕಾರ್ಖಾನೆಗೆ ಬೀಗ ಹಾಕುವುದನ್ನು ನಾನು ತಪ್ಪಿಸಿದ್ದೇನೆ. ಅಲ್ಲಿ ಇನ್ನೂ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರದ ಅನುದಾನದಿಂದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ನಿರ್ಧರಿಸಲಾಗಿದೆ. ಹಾಗೆಯೇ ಜಿಲ್ಲೆಯ ಎಲ್ಲಾ ಕೋರ್ಟ್‌ಗಳಲ್ಲಿ ಪೀಠೋಪಕರಣಕ್ಕಾಗಿ ತಲಾ ೨೫ ಲಕ್ಷ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇನೆ. ಮತ್ತು ಸುಮಾರು ೧೦೦ ಕೋಟಿ ರೂ. ವೆಚ್ಚದಲ್ಲಿ ಮಳೆಮಾಪನ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಬಹಳ ದಿನಗಳಿಂದ ನಿರೀಕ್ಷೆಯಲ್ಲಿರುವ ಎಫ್‌ಎಂ ಕೇಂದ್ರ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. ಸಿಗಂಧೂರು ಸೇತುವೆಯಂತೆ ಹಸಿರುಮಕ್ಕಿ ಸೇತುವೆಗೂ ಕೂಡ ಬಿಜೆಪಿ ಅವಧಿಯಲ್ಲಿ ಹಣ ನೀಡಲಾಗಿತ್ತು ಎಂದ ಅವರು ವಿಮಾನ ನಿಲ್ದಾಣದಲ್ಲಿ ಬಾಕಿ ಉಳಿದಿರುವ ಕೆಲಸವನ್ನು ಶೀಘ್ರವೇ ಮುಗಿಸಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರದ ಸಹಕಾರ ಕೂಡ ಕೇಳಲಾಗಿದೆ ಎಂದರು.
ಒಟ್ಟಾರೆ ರಾಷ್ಟ್ರೀಯ ಹೆದ್ದಾರಿ, ಸಂಪರ್ಕ ರಸ್ತೆಗಳು, ಮೊಬೈಲ್ ಟವರ್‌ಗಳು, ಗ್ರಾಮೀಣ ರಸ್ತೆ, ಹೊಸ ರೈಲುಮಾರ್ಗ, ವಿಐಎಸ್‌ಎಲ್ ಕಾರ್ಖಾನೆ ಉಳುವು ಸೇತುವೆ, ಕುಡಿಯುವ ನೀರಿನ ಯೋಜನೆ, ಎಂಆರ್‌ಎಸ್‌ನಲ್ಲಿ ರಿಂಗ್‌ರೋಡ್ ಅಲ್ಲಿ ಕೆಳಸೇತುವೆ, ಹೊಸ ಆಸ್ಪತ್ರೆ ಇವೆಲ್ಲವೂ ನನ್ನ ಅವಧಿಯಲ್ಲಿ ಆಗಿದೆ ಎಂದರು.
ಸಂವಾದದಲ್ಲಿ ಪ್ರಮುಖರಾದ ಎನ್. ಮಂಜುನಾಥ್, ಹೆಚ್.ಯು.ವೈದ್ಯನಾಥ್, ನಾಗರಾಜ್ ನೇರಿಗೆ, ಹಾಲಸ್ವಾಮಿ ಇದ್ದರು.