*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ*

*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ*

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಶಿವಮೊಗ್ಗ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ ವನ್ನು ಜ.21 ರ ಬೆಳಿಗ್ಗೆ 10.30 ಕ್ಕೆ ಕುವೆಂಪು ರಂಗಮAದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.

ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ಸೋಮವಾರ ಜಿ.ಪಂ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆಹಾರ ಮತ್ತು ನಾಗರೀಕ ಇಲಾಖೆ, ಇಂಧನ ಇಲಾಖೆ, ಸಾರಿಗೆ ಇಲಾಖೆ, ಉದ್ಯೋಗ ವಿನಿಮಯ ಇಲಾಖೆ, ಕೌಶಲ್ಯಾಭಿವೃದ್ದಿ ಇಲಾಖೆ, ಜಿಲ್ಲಾ/ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಪ್ರತಿ ತಾಲ್ಲೂಕುಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಫಲಾನುಭವಿಗಳೊಂದಿಗೆ ಸಂವಾದ ಹಾಗೂ ಯಶೋಗಾಥೆಗಳ ಪ್ರದರ್ಶನವಿರುತ್ತದೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ನೆರವೇರಿಸುವರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಉಪಸ್ಥಿತರಿರುವರು.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕು ಸಮಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಅವರು ಮಾಹಿತಿ ನೀಡಿದರು.

ಜ.21 ರ ಬೆಳಿಗ್ಗೆ 10 ಗಂಟೆಗೆ ಗೋಪಿ ವೃತ್ತದಿಂದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸ್ತಬ್ದಚಿತ್ರಗಳ ಮೆರವಣಿಗೆ ಆರಂಭಗೊಂಡು 10.30 ಕ್ಕೆ ಕುವೆಂಪು ರಂಗಮಂದಿರ ತಲುಪಲಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲೆಯು ಶೇ.98.6 ರಷ್ಟು ಸಾಧನೆ ಮಾಡಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಗ್ಯಾರಂಟಿ ಯೋಜನೆಗಳ ಮೂಲಕ ಸರಾಸರಿ ರೂ.10 ಸಾವಿರ ಮೊತ್ತ ತಲುಪುತ್ತಿದ್ದು, ಜೀವನ ಮಟ್ಟ ಸುಧಾರಣೆಗೆ ಸಹಕಾರಿಯಾಗಿದೆ. ಗ್ಯಾರಂಟಿ ಯೋಜನೆಗಳ ಯಶಸ್ಸು, ಯೋಜನೆಗಳ ಕುರಿತಾದ ಯಶೋಗಾಥೆ ಮತ್ತು ಕುಂದು ಕೊರತೆಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಗುವುದು ಎಂದರು.
ಗೃಹಲಕ್ಷಿö್ಮ ಯೋಜನೆಯಡಿ 2023 ರ ಆಗಸ್ಟ್ನಿಂದ 2025 ರ ಅಕ್ಟೋಬರ್‌ವರೆಗೆ ಒಟ್ಟು 388029 ಫಲಾನುಭವಿಗಳಿಗೆ ರೂ.1805.56 ಕೋಟಿ ಮೊತ್ತವನ್ನು ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 482276 ಫಲಾನುಭವಿಗಳಿಗೆ ರೂ.588.44 ಕೋಟಿ ಮೊತ್ತ ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 2023 ರ ಜುಲೈ ಯಿಂದ 2024 ರ ಡಿಸೆಂಬರ್‌ವರೆಗೆ 22313229 ಫಲಾನುಭವಿಗಳಿಗೆ 360.55 ಕೋಟಿ ಪಾವತಿಸಲಾಗಿದೆ. ಯುವ ನಿಧಿ ಯೋಜನೆಯಡಿ 2023 ರ ಡಿಸೆಂಬರ್ ನಿಂದ 2025 ರ ಜುಲೈ ವರೆಗೆ 86910 ಫಲಾನುಭವಿಗಳಿಗೆ ರೂ.24.41 ಕೋಟಿ ಪಾವತಿಸಲಾಗಿದೆ ಹಾಗೂ ಶಕ್ತಿ ಯೋಜನೆಯಡಿ 65007631 ಮಹಿಳಾ ಫಲಾನುಭವಿಗಳು ಉಚಿತ ಪ್ರಯಾಣ ಮಾಡಿದ್ದು ರೂ.244.98 ಕೋಟಿ ಪಾವತಿಸಲಾಗಿದೆ. ಒಟ್ಟು ಪಂಚ ಗ್ಯಾರಂಟಿಗಳಿಗೆ ಜಿಲ್ಲೆಯಲ್ಲಿ 88278075 ಫಲಾನುಭವಿಗಳಿದ್ದು, ರೂ.3023.95 ಕೋಟಿಯಷ್ಟು ಪಾವತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ ಅವರು ಜ.21 ರಂದು ನಡೆಯುವ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕುರಿತಾದ ಕಾರ್ಯಾಗಾರವನ್ನು ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್ ಶಿವಣ್ಣ, ಇಕ್ಕೇರಿ ರಮೇಶ್, ತಾಲ್ಲೂಕು ಅಧ್ಯಕ್ಷರಾದ ಹೆಚ್ ಎಂ ಮಧು, ಸದಸ್ಯರಾದ ಎಂ ರಾಹುಲ್, ಬಸವ  ಪಾಲ್ಗೊಂಡಿದ್ದರು.