*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?*
*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ;*
*ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?*
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಲಾಗುತ್ತದೆ.


