*ಪೊಲೀಸ್ ಅಧಿಕಾರಿಯ ‘ಕಾಮಕಾಂಡ’ ಬಯಲು* *ಪೊಲೀಸ್ ಡ್ರೆಸ್ಸಲ್ಲೇ ಐಜಿಪಿ ರಾಮಚಂದ್ರರಾವ್ ಕಾಮದಾಟಗಳ ವೀಡಿಯೋ ವೈರಲ್!* *ಇಲ್ಲಿದೆ ಫುಲ್ ಡೀಟೈಲ್ಸ್…*

*ಪೊಲೀಸ್ ಅಧಿಕಾರಿಯ ‘ಕಾಮಕಾಂಡ’ ಬಯಲು*

*ಪೊಲೀಸ್ ಡ್ರೆಸ್ಸಲ್ಲೇ ಐಜಿಪಿ ರಾಮಚಂದ್ರರಾವ್ ಕಾಮದಾಟಗಳ ವೀಡಿಯೋ ವೈರಲ್!*

*ಇಲ್ಲಿದೆ ಫುಲ್ ಡೀಟೈಲ್ಸ್…*

ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ವೈರಲ್ ಆಗಿವೆ. ಈ ‘ಕಾಮಕಾಂಡ’ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.

ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ‘ಕಾಮ’ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.

ಉನ್ನತ ಪೊಲೀಸ್ ಅಧಿಕಾರಿಯ ಈ ಅಸಭ್ಯ ವರ್ತನೆಯ ವಿಡಿಯೋಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಳ ತಲುಪಿವೆ. ಈ ಬಗ್ಗೆ ಮಾಹಿತಿ ಪಡೆದ ಸಿಎಂ, ಅಧಿಕಾರಿಯ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಮವಸ್ತ್ರದ ಘನತೆ ಮರೆತು, ಕಚೇರಿಯಲ್ಲೇ ಇಂತಹ ಕೃತ್ಯವೆಸಗಿರುವುದು ಅಕ್ಷಮ್ಯ ಎಂದು ಸಿಎಂ ಕೆಂಡಾಮಂಡಲವಾಗಿದ್ದು, ಕೂಡಲೇ ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ.

ಪ್ರಮುಖ ಮಾಧ್ಯಮಗಳಲ್ಲಿ ಈ ವರದಿ ಪ್ರಸಾರವಾಗುತ್ತಿದ್ದಂತೆ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಸೇವೆಯಿಂದ ಅಮಾನತು ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.