*ಅವಧಿ ಮೀರಿದ ಆಹಾರ ಪದಾರ್ಥ ಮಾರುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ*
*ಅವಧಿ ಮೀರಿದ ಆಹಾರ ಪದಾರ್ಥ ಮಾರುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ*
ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದ ತಂಡ ದಾಳಿ ಮಾಡಿದ ಘಟನೆ ಸೋಮವಾರದಂದು ನಡೆಯಿತು.
ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯ ವಿದ್ಯಾನಗರದಲ್ಲಿರುವ ಕೆ.ಅರುಣಾರವರ ಅಂಗಡಿ ಮೇಲೆ ಈ ದಾಳಿ ನಡೆದಿದೆ.
ಅವಧಿ ಮುಗಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ಮಾಲೀಕರ ಮುಂದೆಯೇ ನಾಶಪಡಿಸಲಾಗಿದೆ ಎಂದು ತಹಶೀಲ್ದಾರ್ ರಾಜೀವ್ ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು, ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಶಿವಮೊಗ್ಗ ಆಹಾರ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ರಾಜೀವ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಜೊತೆಗೂಡಿ ಈ ಕಾರ್ಯಾಚರಣೆ ಕೈಗೊಂಡರು.


