ಸಿಜೆ ರಾಯ್ ಡೆತ್ ಕೇಸ್ ಎಸ್ಐಟಿಗೆ; ವಂಶಿ ಕೃಷ್ಣ ನೇತೃತ್ವದಲ್ಲಿ ತನಿಖೆ*
*ಸಿಜೆ ರಾಯ್ ಕೇಸ್ ಎಸ್ಐಟಿಗೆ; ವಂಶಿ ಕೃಷ್ಣ ನೇತೃತ್ವದಲ್ಲಿ ತನಿಖೆ*
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್ಪೆಕ್ಟರ್ ರವಿ ಕೂಡ ಈ ಎಸ್ಐಟಿ ತಂಡದಲ್ಲಿದ್ದಾರೆ. ಆತ್ಮಹತ್ಯೆಗೆ ಐಟಿ ರೈಡ್ ಒತ್ತಡವೇ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಎಸ್ಐಟಿ ಈ ಕುರಿತು ಸಮಗ್ರ ತನಿಖೆ ನಡೆಸಲಿದೆ. ಅವರ ಮೊಬೈಲ್ ಫೋನ್ ಪರಿಶೀಲಿಸಿ, ಹಣಕಾಸು ವ್ಯವಹಾರಗಳು ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯಲಿದೆ.


