ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್‌  ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್‌  ಪತ್ರಿಕಾ ಹೇಳಿಕೆ.

2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ.

2026ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅರ್ಹ ಅಧಿಕಾರಿ-ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ರಾಜ್ಯ ಮಟ್ಟಕ್ಕೆ 30 ಪ್ರಶಸ್ತಿ ಹಾಗೂ ಶಿವಮೊಗ್ಗ ಜಿಲ್ಲೆಗೆ 10 ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ರಾಜ್ಯ ಮಟ್ಟದ ಪ್ರಶಸ್ತಿ ತಲಾ 50 ಸಾವಿರ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ತಲಾ 20 ಸಾವಿರ ನಗದು ಬಹುಮಾನ ಒಳಗೊಂಡಿರಲಿದೆ.

ಜಿಲ್ಲಾ ಮತ್ತು ರಾಜ್ಯ ಮಟ್ಟದ ಎರಡೂ ಹಂತದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಧಿಕಾರಿ-ನೌಕರರು ಪ್ರತ್ಯೇಕ ನಾಮನಿರ್ದೇಶನ ಸಲ್ಲಿಸುವ ನೌಕರರು ಕನಿಷ್ಠ 03 ವರ್ಷಗಳ ಸೇವಾವಧಿಯನ್ನು ಪೂರೈಸಿರಬೇಕು. ಕನ್ನಡ ಹಾಗೂ ಆಂಗ್ಲ ಎರಡೂ ಭಾಷೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡದಲ್ಲಿ ಸಲ್ಲಿಸುವವರು ನುಡಿ 6.0 ಆವೃತ್ತಿಯನ್ನು ಮಾತ್ರ ಬಳಸಬೇಕು.

ಆಸಕ್ತರು ತಮ್ಮ ಪ್ರಸ್ತಾವನೆಯನ್ನು kttps://dparkarnataka.gov.in,
kttps://sarvothamaavards.karnataka.gov.in ಮುಖಾಂತರ ಫೆಬ್ರವರಿ 25ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್. ಮೋಹನ್ ಕುಮಾರ್ ಅವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.