ಕವಿಸಾಲು
01
ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್* ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ
*ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್*
ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ
ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿಯವರ ಟೀಕೆಗೆ ನಾವೇನು ಜಗ್ಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನೆಹರೂ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿನಾಕಾರಣ ಬಾಂಬ್ ಬ್ಲಾಸ್ಟ್ ಮತ್ತು ಪಾಕಿಸ್ತಾನ ಪರ ಘೋಷಣೆಯ ವಿಚಾರಗಳನ್ನು ಎತ್ತಿತ್ತಿದ್ದಾರೆ. ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಹೇಳಿದರು. ಯಾರೇ ಆಗಲಿ ದೇಶದ್ರೋಹದ ಕೆಲಸ ಮಾಡಿದರೆ, ಅದನ್ನು ಕ್ಷಮಿಸುವುದಿಲ್ಲ. ಹಾಗೆಯೇ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರನ್ನು ರಕ್ಷಿಸುವ ವಿಷಯವೇ ಇಲ್ಲ. ಎಫ್‌ಎಸ್‌ಎಲ್ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಕ್ರಮ ತೆಗೆದುಕೊಳ್ಳುವಾಗ ಕಾನೂನುನ್ನು ಅನುಸರಿಸುವುದು ಸಹಜ ಪ್ರಕ್ರಿಯೆ ಎಂದರು.
ಹಾಗೆಯೇ ಈಗಾಗಲೇ ಬಾಂಬ್ ಬ್ಲಾಸ್ಟ್ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಖ್ಯಮಂತ್ರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಬಂದಿದ್ದಾರೆ. ಆರೋಪಿಗಳ ಸುಳಿವು ಕೂಡ ಸಿಕ್ಕಿದೆ. ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಾತಿ ಧರ್ಮದ ಮೇಲೆ ಬಿಜೆಪಿ ರಾಜಕಾರಣ ಮಾಡುತ್ತಿದೆ. ಎಫ್‌ಎಸ್‌ಎಲ್ ವರದಿ ಬರಲಿ, ಯಾರು ತಪ್ಪು ಮಾಡಿದ್ದಾರೆ ಅವರು ಶಿಕ್ಷೆ ಅನುಭವಿಸುತ್ತಾರೆ. ವರದಿ ಹೊರಗೆ ಬರಲಿ, ಅದು ಯಾರನ್ನು ಸುತ್ತಿಕೊಳ್ಳುತ್ತದೆ ಕಾದುನೋಡಿ ಎಂದರು.
ಬಿಜೆಪಿ ಸರ್ಕಾರ ಇದ್ದಾಗ ಏನು ಆಗಲೇ ಇಲ್ಲವೆ ? ಈಗ ಭಯೋತ್ಪಾದನೆ ನಿಂತು ಬಿಟ್ಟಿದೆಯೇ? ಈಗ ಮಣಿಪುರದಲ್ಲಿ ಆಗಿದ್ದೇನು ? ರೈತರ ಮೇಲೆ ಗ್ಯಾಸ್ ಬಿಟ್ಟಿದ್ದು ಯಾರು ? ರಾಜ್ಯದಲ್ಲಿ ಈ ಹಿಂದೆ ಬಾಂಬ್ ಬ್ಲಾಸ್ಟ್ ಬಿಜೆಪಿ ಸರ್ಕಾರದಲ್ಲಿಯೇ ಅಲ್ಲವೇ? ಪುಲ್ವಾಮ ದಾಳಿ ಯಾವಾಗ ಆಯಿತು? ಇದೇಕೆ ಬಿಜೆಪಿಯವರಿಗೆ ಅರ್ಥವಾಗುತ್ತಿಲ್ಲ? ಚುನಾವಣೆ ಬಂತು ಎಂದರೇ ಸಾಕು ಇಂತಹ ವಿಷಯಗಳನ್ನು ಇಟ್ಟುಕೊಂಡು ಶಾಂತಿಯನ್ನು ಕದಡುವ, ಧರ್ಮಗಳನ್ನು ಮಧ್ಯ ತರುವ ಕೆಲಸಗಳನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಇದು ಸರಿಯಲ್ಲ, ಜನರು ಈಗಾಗಲೇ ಇವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಮೋದಿಯವರ ಗ್ಯಾರಂಟಿಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ರಾಜ್ಯ ಸರ್ಕಾರ ಗ್ಯಾರಂಟಿಗಳು ಈಗಾಗಲೇ ಮನೆ ಮನೆ ತಲುಪುತ್ತಿವೆ ಎಂದರು.
ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡಲು ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮಪಂಚಾಯಿತಿಗಳಿಗೆ ಅನುದಾನ ನೀಡುವುದು ಯಾರು ? ಕೇಂದ್ರ ಸರ್ಕಾರ ಅಲ್ಲವೇ ? ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಲಿ? ರಾಜ್ಯ ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಎಲ್ಲ ಜಿಲ್ಲಾಧಿಕಾರಿಗಳ ಬಳಿ ಹಣ ಇದೆ. ತೀರ ತೊಂದರೆಯಾದ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.