ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು
ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ
ಪ್ರಶಸ್ತಿ ವಿಜೇತ 10 ಶಾಲೆಗಳು

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರಿನಲ್ಲಿ ವಿಕಾಸ ಸೌಧದಲ್ಲಿ ನಡೆದ ಈ ಸಮಾರಂಭದಲ್ಲಿ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, WWF ಇಂಡಿಯಾದ ಸಿಇಒ ಕರಣ್ ಭಲ್ಲಾ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
“ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದಬಾರದು. ವಿಷಯವನ್ನು ಆಳವಾಗಿ ಅರ್ಥೈಸಿಕೊಳ್ಳುವುದರ ಕಡೆಗೆ ಗಮನ ಹರಿಸಬೇಕು. ಅರಿವು ಮೂಡಿದರೆ ಫಲಿತಾಂಶ ತಾನಾಗಿಯೇ ಉತ್ತಮವಾಗುತ್ತದೆ,” ಎಂದು ಸಚಿವರು ಕಿವಿಮಾತು ಹೇಳಿದರು.
ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, “ಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು,” ಎಂದರು.
ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಅವರು ಪ್ರತಿಪಾದಿಸಿದರು.
ಸರ್ಕಾರಿ ಶಾಲಾ ಶಿಕ್ಷಕರ ಮೆರಿಟ್ ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಸಚಿವರು, ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿರುವ ಬಿಸಿಯೂಟ, ರಾಗಿಮಾಲ್ಟ್, ಹಾಲು, ಮೊಟ್ಟೆ/ಬಾಳೆಹಣ್ಣು, ಪಠ್ಯಪುಸ್ತಕ ಮತ್ತು ಸಮವಸ್ತ್ರಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ನಾಗಭೂಷಣ್ ಮತ್ತು ರೆಹಮಾನ್ ಬಿ ಅವರು ಮಿಷನ್ ಪ್ರಕೃತಿಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ವನ್ಯಜೀವಿಗಳ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಈ ಅಭಿಯಾನವು ತಮಗೆ ಹೇಗೆ ಕಲಿಸಿಕೊಟ್ಟಿತು ಎಂಬುದನ್ನು ವಿವರಿಸಿದರು.
ಸಚಿವರು ಪ್ರಶಸ್ತಿ ವಿಜೇತ ಶಾಲೆಗಳಿಗೆ ಅಭಿನಂದನೆ ಸಲ್ಲಿಸುತ್ತಾ, ಇಲ್ಲಿ ಕಲಿತ ವಿಷಯಗಳನ್ನು ಇತರ ವಿದ್ಯಾರ್ಥಿಗಳಿಗೂ ಹಂಚಿಕೊಳ್ಳುವಂತೆ ಕರೆ ನೀಡಿದರು.
ಪ್ರಶಸ್ತಿ ವಿಜೇತ 10 ಶಾಲೆಗಳು:
ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭ್ಯಾಸಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಈ ಕೆಳಗಿನ ಶಾಲೆಗಳನ್ನು ಗೌರವಿಸಲಾಯಿತು:
* ಜಿ.ಎಂ.ಪಿ.ಎಚ್.ಎಸ್, ಎಮ್ಮಿಗನೂರು, ಬಳ್ಳಾರಿ.
* ಜಿ.ಕೆ.ಎಚ್.ಪಿ.ಎಸ್, ಕಾತ್ರಾಳ, ಕಾಗವಾಡ, ಬೆಳಗಾವಿ.
* ಜಿ.ಎಚ್.ಎಸ್, ಅಲಿಪುರ, ಚಿಕ್ಕಬಳ್ಳಾಪುರ.
* ಜಿ.ಎಚ್.ಪಿ.ಎಸ್, ಹಿರೇಗೋಣಿಗೆರೆ, ದಾವಣಗೆರೆ.
* ಜಿ.ಎಚ್.ಪಿ.ಎಸ್, ಜೋಡಳ್ಳಿ, ಕಲಘಟಗಿ.
* ಕೆ.ಪಿ.ಎಸ್, ಕೋಟೇಶ್ವರ, ಕುಂದಾಪುರ, ಉಡುಪಿ.
* ಡಿ.ಕೆ.ಜೆಡ್.ಪಿ, ಅಳಿಯೂರು, ದಕ್ಷಿಣ ಕನ್ನಡ.
* ಕೆ.ಎಸ್.ಎಸ್ ಜಿ.ಎಚ್.ಎಸ್, ಹಕ್ಲಾಡಿ, ಬೈಂದೂರು, ಉಡುಪಿ.
* ಕೆ.ಜಿ.ಬಿ.ವಿ, ಯಳಂದೂರು, ಚಾಮರಾಜನಗರ.
* ಜಿ.ಎಚ್.ಪಿ.ಎಸ್, ಮಲ್ಲೂರು, ಉಡುಪಿ.


