ಫೆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಎನ್.ಹೇಮಂತ್ ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ

ಫೆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಎನ್.ಹೇಮಂತ್

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ :

ಫೆಬ್ರವರಿ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ತುಳಸಿ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಭಾಗವಹಿಸಿ, ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಉದ್ಯೋಗ ಮೇಳದಲ್ಲಿ ಶಿವಮೊಗ್ಗ ಹಾಗೂ ರಾಜ್ಯದೆಲ್ಲೆಡೆಯಿಂದ 50ಕ್ಕೂ ಹೆಚ್ಚಿನ ಉದ್ಯೋಗದಾತ ಪ್ರತಿಷ್ಠಿತ ಕಂಪನಿಗಳ ಮುಖ್ಯಸ್ಥರು ಭಾಗವಹಿಸಿಲಿದ್ದಾರೆ. ಎಸ್.ಎಸ್.‌ಎಲ್.‌ಸಿ.ಯಲ್ಲಿ ಉತ್ತೀರ್ಣ/ಅನುತ್ತೀರ್ಣ, ಪಿ.ಯು.ಸಿ., ಯಾವುದೇ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ಮತ್ತಿತರ ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವ ಯುವಕ-ಯುವತಿಯರು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದವರು ತಿಳಿಸಿದರು.
ಉಚಿತ ಪ್ರವೇಶಾವಕಾಶವಿದ್ದು, ಯುವತಿಯರಿಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದೆ. ಈ ಉದ್ಯೋಗಮೇಳದಲ್ಲಿ ಐ.ಟಿ., ಕಂಪ್ಯೂಟರ್‌, ಆಟೋಮೊಬೈಲ್‌, ಮೆನ್ಯುಫ್ಯಾಕ್ಚರಿಂಗ್‌, ನರ್ಸಿಂಗ್‌, ಬ್ಯಾಂಕಿಂಗ್‌, ಇನ್ಶೂರೆನ್ಸ್‌ಹೀಗೆ ಇನ್ನೂ ಹಲವು ಕ್ಷೇತ್ರಗಳಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶಗಳು ದೊರೆಯಲಿವೆ. ವ್ಯಾಸಂಗ ಮುಂದುವರೆಸುತ್ತಿರುವ ವಿದ್ಯಾರ್ಥಿಗಳು ಇಂಟರ್ನಶಿಫ್‌ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳೂ ಸಹ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದ ಅವರು, ಆಸಕ್ತರು ತಮ್ಮ ಸ್ವವಿವರ, ಭಾವಚಿತ್ರ, ಆಧಾರ್‌ಕಾರ್ಡ್‌, ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯ ಪ್ರಮಾಣಪತ್ರ ಹಾಗೂ ಅವುಗಳ ಐದು ಝೆರಾಕ್ಸ್‌ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಆನ್‌ಲೈನ್‌ಮೂಲಕ ಹಾಗೂ ಉದ್ಯೋಗಮೇಳದ ಸ್ಥಳದಲ್ಲಿ ಖುದ್ದಾಗಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.
ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಎನ್.‌ಆರ್.‌ಎಲ್.‌ಎಂ.ಘಟಕ, ಜಿಲ್ಲಾ ಪಂಚಾಯತ್‌ಶಿವಮೊಗ್ಗ ಮತ್ತು ತಾಲೂಕು ಪಂಚಾಯತ್‌ಎನ್.‌ಆರ್.‌ಎಲ್.‌ಎಂ.ವಿಭಾಗಗಳನ್ನು ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದರು.

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ;

ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 19009ವಿದ್ಯಾರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 7188ಬಾಲಕರು ಹಾಗೂ 10567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 17,755ರೆಗ್ಯೂಲರ್‌ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗಾಗಿ 03ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮೂರು ಜನರ ಅಧಿಕಾರಿಗಳ 12 ತಂಡವನ್ನು ರಚಿಸಲಾಗಿದ್ದು, ಅಗತ್ಯ ಪೊಲೀಸ್‌ಭದ್ರತೆ ಒದಗಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಭಾರತೀಯ ನ್ಯಾಯಸಂಹಿತೆ 163ಪ್ರಕಾರ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್‌ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚಿಸಲಾಗಿದೆ. ಅಲ್ಲದೇ ವಿಶೇಷವಾಗಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತ ಬಸ್‌ಸೌಲಭ್ಯವನ್ನು ಒದಗಿಸಲಾಗಿದ್ದು, ಬಸ್‌ಸಂಚರಿಸುವ ಮಾರ್ಗದಲ್ಲಿನ ವಿದ್ಯಾರ್ಥಿಗಳು ತಮ್ಮ ಪರೀಕ್ಷಾಕೇಂದ್ರದ ಪ್ರವೇಶಪತ್ರವನ್ನು ತೋರಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದರು.
ಪರೀಕ್ಷಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ ಆತಂಕವಿಲ್ಲದೇ ಸಮಾಧಾನಚಿತ್ತರಾಗಿ ಪರೀಕ್ಷೆಯಲ್ಲಿ ಭಾಗವಹಿಸಿ, ಈವರೆಗಿನ ಅವಧಿಯಲ್ಲಿ ತಾವು ಓದಿದ ವಿಷಯವನ್ನು ಅರಿತು ಸಕಾಲಿಕವಾಗಿ ಉತ್ತರಿಸುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗುವಂತೆ ಸೂಚಿಸಿದ ಅವರು, ಕಲಿಕೆಯಿಂದ ಹಿಂದುಳಿದ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ವಿಶೇಷ ತರಗತಿಗಳ ಮೂಲಕ ಬೋಧನೆ ನಡೆಸಲಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಪೋಷಕರ ಕೋರಿಕೆಯ ಮೇರೆಗೆ ಪ್ರತಿನಿತ್ಯ ಸಂಜೆ ವಿಶೇಷ ಕಲಿಕಾ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದರು.
ಜಿಲ್ಲೆಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದ ಅವರು, ಪ್ರತಿ ವಿದ್ಯಾರ್ಥಿಯ ಕಲಿಕೆಯಲ್ಲಿ ಹಿನ್ನೆಡೆಗೆ ಇರುವ ಸೂಕ್ಷ್ಮ ಕಾರಣಗಳನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ಸಿ.ಇ.ಟಿ. ತರಬೇತಿ ತರಗತಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ ನೋಡಿಕೊಳ್ಳುವ ಸದಾಶಯ ಹೊಂದಲಾಗಿದೆ ಎಂದರು.
ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು ಎಂದ ಅವರು, ಸಾಮಾಜಿಕ ಜಾಲತಾಣಗಳನ್ನು ಸೋರಿಕೆಯಾಗುವ ಪ್ರಶ್ನೆಪತ್ರಿಕೆಗಳು ನಕಲಿ ಹಾಗೂ ನಂಬಲರ್ಹವಾದುವುಗಳಲ್ಲ. ಇದರಿಂದಾಗಿ ವಿಚಲಿತರಾಗದಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್‌ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಅವರು ಉಪಸ್ಥಿತರಿದ್ದರು.