*ಬಾಲಕ ಸಂಕೇತ್ ಸಾವಿಗೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ;* *15 ಲಕ್ಷ ಪರಿಹಾರ ಘೋಷಣೆ*
*ಬಾಲಕ ಸಂಕೇತ್ ಸಾವಿಗೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ;*
*15 ಲಕ್ಷ ಪರಿಹಾರ ಘೋಷಣೆ*

ಶಿವಮೊಗ್ಗದಲ್ಲಿ (Shivamogga) ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ.
ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಅಪ್ರಾಪ್ತ ಬಾಲಕನ ಸಾವಿಗೆ ಸರ್ಕಾರದಿಂದ ಒಟ್ಟು 15 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಇದರಲ್ಲಿ 10 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಘಟನೆ ಬಳಿಕ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆ ನಡೆದ ಬಡಾವಣೆಯಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾತ್ರೆ ಹಾಗೂ ಮುಂಬರುವ ಹಬ್ಬಗಳ ಹಿನ್ನೆಲೆ ಹೆಚ್ಚುವರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಊರುಗಡೂರು ಭಾಗದಲ್ಲಿ ಔಟ್‌ಪೋಸ್ಟ್ ತೆರೆಯುವ ಮೂಲಕ ವಿಶೇಷ ಪೊಲೀಸ್ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


