ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ  ಬೃಹತ್ ಉದ್ಯೋಗ ಮೇಳ ಆರಂಭ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ: ಶಾಸಕ ಎಸ್.ಎನ್. ಚನ್ನಬಸಪ್ಪ

ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ  ಬೃಹತ್ ಉದ್ಯೋಗ ಮೇಳ ಆರಂಭ

ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ: ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಂದು ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಶಾಸಕರಾದ  ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರು, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಗೆ ಕೇವಲ ಪದವಿ ಮುಖ್ಯವಲ್ಲ, ಅದರೊಂದಿಗೆ ಉದ್ಯೋಗದ ಕೌಶಲ್ಯವೂ ಅತಿ ಅಗತ್ಯ. ಜಿಲ್ಲೆಯ ಅಭ್ಯರ್ಥಿಗಳಿಗೆ ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಸೂಕ್ತ ಕೆಲಸ ದೊರಕಿಸಿಕೊಡುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಕಂಪನಿಗಳು ಮತ್ತು ಅಭ್ಯರ್ಥಿಗಳ ನಡುವೆ ಈ ಮೇಳವು ಒಂದು ಸೇತುವೆಯಾಗಿ ಕೆಲಸ ಮಾಡುತ್ತಿದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ  ಡಿ.ಎಸ್ ಅರುಣ್, ಜಿಲ್ಲಾಧಿಕಾರಿಗಳಾದ  ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಬಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.