*ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ;* ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್- *ನಾಜಿಮಾ- ವೈ.ತಿಮ್ಮರಾಜು ಕಾಂಗ್ರೆಸ್ ನಿಂದ 6 ವರ್ಷ ಉಚ್ಛಾಟನೆ*
*ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ;*
*ನಾಜಿಮಾ- ವೈ.ತಿಮ್ಮರಾಜು ಕಾಂಗ್ರೆಸ್ ನಿಂದ 6 ವರ್ಷ ಉಚ್ಛಾಟನೆ*
ಸರ್ಕಾರಿ ಕಚೇರಿಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ, ಸಚಿವರು- ವಿಧಾನ ಪರಿಷತ್ ಸದಸ್ಯರ ಹೆಸರು ಬಳಸಿ 3 ಲಕ್ಷ ರೂ.,ಗಳನ್ನು ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ನಾಜಿಮಾ ಮತ್ತು ವೈ.ತಿಮ್ಮರಾಜುರನ್ನು ಪಕ್ಷವು 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶಿಸಿದೆ.
ಭದ್ರಾವತಿ ಮೂಲದ ಮಹಿಳೆಯೊಬ್ಬರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವುದಾಗಿ ವೈ.ತಿಮ್ಮರಾಜು ನಿರ್ದೇಶನದ ಮೇರೆಗೆ ನಾಜಿಮಾ ಹಣ ಪಡೆದು ವಂಚಿಸಿದ್ದಾರೆಂದು ಮಾ.1 ರಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಿಂದ ಪಕ್ಷಕ್ಕೆ ಮುಜುಗರವಾಗಿದ್ದು, ಆರೋಪಿ ಸ್ಥಾನದಲ್ಲಿರುವ ನಾಜಿಮಾ ಮತ್ತು ವೈ. ತಿಮ್ಮರಾಜುರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಹಾಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್ ರವರ ಆದೇಶದ ಮೇರೆಗೆ ಈ ಉಚ್ಛಾಟನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.


