ದೂರದೃಷ್ಟಿಯ ಅಭಿವೃದ್ಧಿ ಪರ ಬಜೆಟ್ ಎಂದ ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ
ದೂರದೃಷ್ಟಿಯ ಅಭಿವೃದ್ಧಿ ಪರ ಬಜೆಟ್ ಎಂದ ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ
ಶಿವಮೊಗ್ಗ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಸಭೆಯಲ್ಲಿ ಮಂಡಿಸಿದ ೨೦೨೬- ೨೭ ನೇ ಸಾಲಿನ ಬಜೆಟ್ ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ ಆಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ ನೀಡಿರುವುದು ವಿಶೇಷವಾಗಿದೆ ಎಂದು ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ ಅಭಿಪ್ರಾಯಿಸಿದ್ದಾರೆ.
ರಾಜ್ಯದ ಜನರ ಜನಮನ್ನಣೆ ಪಡೆದ ಪಂಚ ಗ್ಯಾರಂಟಿ ಗಳನ್ನು ಮುಂದುವರೆಸುತ್ತಲೇ ಅವುಗಳಿಗೆ ಆದ್ಯತೆ ನೀಡುವುದರ ಮೂಲಕ ನಿರುದ್ಯೋಗಿ ಯುವಕರಿಗೆ ಉದ್ಯೋಗವಾಕಾಶ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಗೆ 54,000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ಒತ್ತು ನೀಡಿದ್ದು, ಖಾಸಗಿ ವಲಯದ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ ಇದು ಉದ್ಯೋಗವಕಾಶ ದ ಬಜೆಟ್ ಆಗಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ವಲಯಕ್ಕೆ ವಿಶೇಷ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರತಿಷ್ಟಿತ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಯು. ಆರ್. ಅನಂತ ಮೂರ್ತಿ ಅವರ ಅಧ್ಯಯನ ಪೀಠ ಸ್ಥಾಪಿಸಿರುವುದು ಜಿಲ್ಲೆಗೆ ಸಿಕ್ಕ ಆದ್ಯತೆ ಆಗಿದೆ.ಹಾಗೆಯೇ ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ಈ ಬಜೆಟ್
ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸು ವ ದೂರದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿಗೆ ಬಜೆಟ್ ಮಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
….


