ಮಾ. 5-06 ರಂದು ಅತಿರುದ್ರ ಮಹಾಯಾಗ

ಮಾ. 5-6  ರಂದು ಅತಿರುದ್ರ ಮಹಾಯಾ

:ದೇಶದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಾ. ೫ ಮತ್ತು ೬ ರಂದು ಅತಿರುದ್ರ ಮಹಾಯಾಗವನ್ನು ವಿನೋಬನಗರದ ಮುಖ್ಯ ರಸ್ತೆಯಲ್ಲಿರುವ ಶಿವಾಲಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು ಇಂದು ಪೂಜಾ ಕಾರ್ಯಕ್ರಮದಲ್ಲಿ ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾ ಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಮಹಾಯಾಗವು ಪ್ರಾರಂಭಗೊಂಡಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್.ರುದ್ರೇಗೌಡ್ರ, ಡಿ.ಎಸ್.ಅರುಣ್, ಹಾಗೂ ಸಮಿತಿಯ ಪ್ರಮುಖರಾದ ಎನ್.ಜೆ.ರಾಜಶೇಖರ್, ಡಾ.ದನಂಜಯ ಸರ್ಜಿ, ಎಚ್.ವಿ.ಮಹೇಶ್ವರಪ್ಪ, ಎಸ್. ದತ್ತಾತ್ರಿ, ಎಸ್. ಜ್ಞಾನೇಶ್ವರ್, ಅಶ್ವಥ್ ನಾರಾಯಣ ಶೆಟ್ಟಿ, ಜಿ.ಆರ್. ವಾಸುದೇವ್, ಎನ್.ಡಿ.ಸತೀಶ್, ಬಳ್ಳಕೆರೆ ಸಂತೋಷ್, ಸಿ.ಮಹೇಶ್ ಮೂರ್ತಿ, ದಿವಾಕರ್ ಶೆಟ್ಟಿ, ಮೋಹನ್‌ಕುಮಾರ್ ಬಾಳೆ ಕಾಯಿ, ಮಹಾಲಿಂಗಯ್ಯ ಶಾಸ್ತ್ರಿ, ನಾಗಯ್ಯ ಶಾಸ್ತ್ರಿಗಳು,ಇ.ವಿಶ್ವಾಸ್, ಅನಿತಾ ರವಿಶಂಕರ್, ಮೋಹನ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.